Monday, 16 November 2026 — Kannadavahini
BREAKING NEWS
ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ತಾಜಾ ಸುದ್ದಿ

ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿ, ಕೇಂದ್ರದ ಕೆಲಸ ಮಾಡಬಾರದು: ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು

ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಮಾಡಿದ್ದಾರೆ. ಅವರು ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ. ಇನ್ನೂ ಯಾಕೆ ಅನುಮತಿ ನೀಡಿಲ್ಲ ಎಂದು ಪ್ರಶ್ನಿಸಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023 ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ಲೋಕಾಯುಕ್ತ ಮತ್ತೊಮ್ಮೆ ಕೋರಿದ್ದಾರೆ. ಆದರೆ 26-07-2024 ರಂದು ಅಬ್ರಾಹಂ ರವರು ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ  ನೀಡಿದ್ದು, ಇಂತಹ ತಾರತಮ್ಯವೇಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯಪಾಲರನ್ನು ಟೀಕಿಸಿದ್ದಕ್ಕೆ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಶಶಿಕಲಾ ಜೊಲ್ಲೆ, ಹೆಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಮೇಲಿರುವ ಆರೋಪಗಳಿಗೆ ಇದುವರೆಗೆ ತನಿಖೆಗೆ ಆದೇಶಿಸಿಲ್ಲ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾಗಿದ್ದು, ಅವರ ಮೇಲೆ ಗೌರವವಿದೆ. ಆದರೆ ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸಬಾರದು ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8419 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment