Thursday, December 25, 2025
Google search engine
Homeತಾಜಾ ಸುದ್ದಿಪೆಟ್ರೋಲ್, ಡೀಸೆಲ್ ದರ ಲೀಟರ್ ಗೆ 2 ರೂ. ಏರಿಸಿದ ಕೇಂದ್ರ ಸರ್ಕಾರ: ಇಂದು ಮಧ್ಯರಾತ್ರಿಯಿಂದಲೇ...

ಪೆಟ್ರೋಲ್, ಡೀಸೆಲ್ ದರ ಲೀಟರ್ ಗೆ 2 ರೂ. ಏರಿಸಿದ ಕೇಂದ್ರ ಸರ್ಕಾರ: ಇಂದು ಮಧ್ಯರಾತ್ರಿಯಿಂದಲೇ ಜಾರಿ?

ಯುಗಾದಿ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಸುಂಕ ವಿಧಿಸಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ.

ಕೇಂದ್ರ ಸರ್ಕಾರ ತೈಲ ಕಂಪನಿಗಳ ಮೇಲೆ ಲೀಟರ್ ಗೆ 2 ರೂ. ದರ ಏರಿಸಿದೆ. ಈ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ 4 ವರ್ಷಗಳಲ್ಲೇ ಕನಿಷ್ಠ ಮೊತ್ತಕ್ಕೆ ಕಚ್ಛಾ ತೈಲ ಬೆಲೆ ಇಳಿದಿದೆ. ಇದರ ಲಾಭ ಪಡೆಯಲು ಕೇಂದ್ರ ಸರ್ಕಾರ ಲೀಟರ್ ಗೆ 2 ರೂ. ಸುಂಕ ಹೆಚ್ಚಿಸಿದೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಸುಂಕ ವಿಧಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸುಂಕ ವಿಧಿಸಿದೆ. ಇದರಿಂದ ಈಗಾಗಲೇ ಗಗನಮುಖಿ ಆಗಿರುವ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments