Home ತಾಜಾ ಸುದ್ದಿ Gowtam Adani 2238 ಕೋಟಿ ಲಂಚದ ಆಮೀಷ: ಗೌತಮ್ ಅದಾನಿ, ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ!

Gowtam Adani 2238 ಕೋಟಿ ಲಂಚದ ಆಮೀಷ: ಗೌತಮ್ ಅದಾನಿ, ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ!

by Editor
0 comments
kannadavahini - gowtam adani

ಬಹುಕೋಟಿ ಲಂಚದ ಆಮೀಷ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಪ್ರಮುಖ ಉದ್ಯಮಿ ಗೌತಮ್ ಅದಾನಿ ಹಾಗೂ ಸೋದರಳಿಯ ಸಾಗರ್ ಅದಾನಿ ವಿರುದ್ಧ ಅಮೆರಿಕದ ನ್ಯೂಯಾರ್ಕ್ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.

ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಅಮೆರಿಕದಲ್ಲಿರುವ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 2238 ಕೋಟಿ ರೂ. ಲಂಚ ನೀಡಲು ಮುಂದಾದ ಆರೋಪದ ಮೇಲೆ ನ್ಯೂಯಾರ್ಕ್ ನ್ಯಾಯಾಲಯ ಬಂಧನ ಆದೇಶ ಹೊರಡಿಸಿದ್ದು, ಈ ವಾರೆಟ್‌ಗಳನ್ನು ಜಾರಿಗೊಳಿಸಲು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ.

ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ, ಸೈರಿಲ್ ಕೆಬನೆಸ್,  ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಸೇರಿದಂತೆ ೮ ಮಂದಿಯ ವಿರುದ್ಧ ವಂಚನೆ ಮತ್ತು ಪಿತೂರಿ ಆರೋಪ ಮಾಡಲಾಗಿದೆ.

ಕಳೆದ ವರ್ಷ ಭಾರತದಲ್ಲಿ 20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ (ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಎಂಟರ್‌ಪ್ರೈಸಸ್‌ ಚಾಲನೆ ನೀಡುವ ಸಂದರ್ಭದಲ್ಲಿ ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಪ್ರಕಟಿಸಿತ್ತು.

banner

ಅಮೆರಿಕದಲ್ಲಿ ಅದಾನಿ ಗ್ರೀನ್‌ ಎನರ್ಜಿಗಾಗಿ 6,000 ಮಿಲಿಯನ್‌ ಅಮೆರಿಕನ್‌ ಡಾಲರ್‌ ಬಾಂಡ್‌ ಬಿಡುಗಡೆ ಮಾಡಿ ಹೂಡಿಕೆ ಸಂಗ್ರಹಿಸಲು ಮುಂದಾಗಿದ್ದ ಗೌತಮ್‌ ಅದಾನಿ ಅವರಿಗೆ ಅಮೆರಿಕ ನ್ಯಾಯಾಂಗ ಇಲಾಖೆ ಶಾಕ್‌ ನೀಡಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ನಕಲಿ ಗ್ರಾಹಕರ ಸೋಗಿನಲ್ಲಿ ಮೀಶೋ ಕಂಪನಿಗೆ 5.50 ಕೋಟಿಗೆ ವಂಚನೆ: ಮೂವರು ಗುಜರಾತಿಗಳು ಅರೆಸ್ಟ್! ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ಶುಕ್ರವಾರಕ್ಕೆ ಮುಂದೂಡಿಕೆ ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ ಮಾಸಾಂತ್ಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾಪರ್ಣೆ: ಡಾ.ಶರಣಪ್ರಕಾಶ್ ಪಾಟೀಲ್ 1,10,000 ಕೋಟಿ ರೂ. ತೆರಿಗೆ ಸಂಗ್ರಹಿಸಿ ದಾಖಲೆ ಬರೆದ ಕರ್ನಾಟಕ! IRCTC ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ರೈಲು ವಿಳಂಬವಾದರೆ ಉಚಿತ ಆಹಾರ! ವಿರಾಟ್ ಕೊಹ್ಲಿ 2ನೇ ಟೆಸ್ಟ್ ನಿಂದ ಹೊರಗೆ? ಅನುಮಾನ ಮೂಡಿಸಿದ ಕಾಲಿನ ಬ್ಯಾಂಡೇಜ್! ಟಿ-20ಯಲ್ಲಿ ಅತ್ಯಂತ ವೇಗದ `ಡಬಲ್' ಶತಕದ ವಿಶ್ವದಾಖಲೆ ಬರೆದ ಉರ್ವಿಲ್ ಪಟೇಲ್! ಕುತ್ತಿಗೆಗೆ ಬೋರ್ಡ್ ನೇತಾಕಿಕೊಂಡು ದೇವಸ್ಥಾನದಲ್ಲಿ ತಟ್ಟೆ ತೊಳೆದ ಪಂಜಾಬ್ ಮಾಜಿ ಡಿಸಿಎಂ! ನಿರ್ಮಲಾ ಸೀತಾರಾಮನ್, ಕಟೀಲ್ ಗೆ ಬಿಗ್ ರಿಲೀಫ್:  ಚುನಾವಣಾ ಅಕ್ರಮ ಸುಲಿಗೆ ಪ್ರಕರಣ ರದ್ದು!