Thursday, September 19, 2024
Google search engine
Homeಕ್ರೀಡೆಗುಜರಾತ್ 89 ರನ್ ಆಲೌಟ್: ಡೆಲ್ಲಿಗೆ 6 ವಿಕೆಟ್ ಸುಲಭ ಜಯ

ಗುಜರಾತ್ 89 ರನ್ ಆಲೌಟ್: ಡೆಲ್ಲಿಗೆ 6 ವಿಕೆಟ್ ಸುಲಭ ಜಯ

ಬೌಲರ್ ಗಳ ಪರಾಕ್ರಮದಿಂದ ಗುಜರಾತ್ ಟೈಟಾನ್ಸ್ ತಂಡವನ್ನು 89 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳ ಸುಲಭ ಗೆಲುವು ಕಂಡಿದೆ. ಈ ಮೂಲಕ ಐಪಿಎಲ್ ಪ್ಲೇಆಫ್ ರೇಸ್ ನಲ್ಲಿ ಉಳಿದುಕೊಂಡಿದೆ.

ಅಹಮದಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 17.3 ಓವರ್ ಗಳಲ್ಲಿ 89 ರನ್ ಗೆ ಪತನಗೊಂಡಿತು. ಸುಲಭ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ 7 ಪಂದ್ಯಗಳಿಂದ 3 ಗೆಲುವು, 4 ಸೋಲಿನೊಂದಿಗೆ 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದ್ದು, ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಗುಜರಾತ್ ಟೈಟಾನ್ಸ್ ಇಷ್ಟೇ ಅಂಕದೊಂದಿಗೆ 7ನೇ ಸ್ಥಾನಕ್ಕೆ ಕುಸಿಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments