Thursday, September 19, 2024
Google search engine
Homeಕ್ರೀಡೆಗಿಲ್-ಸಾಯಿ ಶತಕದಾಟ: ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ಗುಜರಾತ್ ಟೈಟಾನ್ಸ್ ಆಸೆ ಜೀವಂತ!

ಗಿಲ್-ಸಾಯಿ ಶತಕದಾಟ: ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ಗುಜರಾತ್ ಟೈಟಾನ್ಸ್ ಆಸೆ ಜೀವಂತ!

ಆರಂಭಿಕರಾದ ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಸಿಡಿಸಿದ ಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 35 ರನ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 231 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಗಳಿಸಲಷ್ಟೇ ಶಕ್ತವಾಯಿತು.

ಚೆನ್ನೈ ತಂಡ 10 ರನ್ ಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತದಿಂದ ತತ್ತರಿಸಿತು. ಈ ಹಂತದಲ್ಲಿ ಮೊಯಿನ್ ಅಲಿ ಮತ್ತು ಡ್ರೈಲ್ ಮಿಚೆಲ್ ಅರ್ಧಶತಕ ಬಾರಿಸಿದ್ದೂ ಅಲ್ಲದೇ 4ನೇ ವಿಕೆಟ್ ಗೆ 109 ರನ್ ಜೊತೆಯಾಟದಿಂದ ಗೆಲುವಿನ ಆಸೆ ಮೂಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments