Thursday, September 19, 2024
Google search engine
Homeತಾಜಾ ಸುದ್ದಿ6 ತಿಂಗಳಲ್ಲಿ ಬಿಜೆಪಿ ಅರ್ಧದಷ್ಟು ಮುಖಂಡರು ಜೈಲಲ್ಲಿ ಇರುತ್ತಾರೆ: ಪ್ರಿಯಾಂಕ್ ಖರ್ಗೆ

6 ತಿಂಗಳಲ್ಲಿ ಬಿಜೆಪಿ ಅರ್ಧದಷ್ಟು ಮುಖಂಡರು ಜೈಲಲ್ಲಿ ಇರುತ್ತಾರೆ: ಪ್ರಿಯಾಂಕ್ ಖರ್ಗೆ

ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ 6 ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಓಡಾಡುತ್ತಿರುತ್ತಾರೆ ಎಂದರು.

ಬಿಜೆಪಿ ನಾಯಕರ ಮೇಲೆ 35ಕ್ಕೂ ಹೆಚ್ಚು ಪ್ರಕರಣಗಳಿದ್ದು, ಮೂರ್ನಾಲ್ಕು ಪ್ರಕರಣಗಳಲ್ಲಿ ಮಧ್ಯಂತರ ವರದಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಹಿಂದಿನ ಸರ್ಕಾರದಲ್ಲಿ ತೀವ್ರ ಭ್ರಷ್ಟಾಚಾರ ನಡೆದಿತ್ತು. ಅದರ ಮೇಲೆ ಕೆಲಸ ಮಾಡುತ್ತಿದ್ದು, ಮುಂದಿನ ಆರು ತಿಂಗಳಲ್ಲಿ ಅರ್ಧದಷ್ಟು ಬಿಜೆಪಿ ನಾಯಕರು ಜಾಮೀನಿಗಾಗಿ ಓಡುತ್ತಾರೆ ಅಥವಾ ಜೈಲಿನಲ್ಲಿರುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ರಾಜ್ಯಪಾಲರ ಮುಂದೆ ಹತ್ತಾರು ಪ್ರಕರಣಗಳಿವೆ. ಅದರಲ್ಲೂ ಎಚ್.ಡಿ. ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ ಮತ್ತು ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ದೂರುಗಳು ಒಂದೂವರೆ ವರ್ಷದಿಂದ ರಾಜ್ಯಪಾಲರ ಮುಂದಿದೆ. ಆದರೆ ಯಾಕೆ ಇದುವರೆಗೂ ಯಾವುದೇ ಕೈಗೊಳ್ಳದ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟ ಕೆಲವೇ ಗಂಟೆಯಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅವರು ವಿವರಿಸಿದರು.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದ ಅವರು, ಬಿಜೆಪಿ ನಾಯಕರ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸಾಧ್ಯವೇ ಇಲ್ಲ. ಹೀಗಾಗಿ ಸಿಬಿಐ, ಐಟಿ, ಇಡಿ ಮತ್ತು ಸ್ವತಃ ರಾಜ್ಯಪಾಲರನ್ನು ಬಳಸಿಕೊಂಡು ಪ್ರಕರಣವನ್ನು ಜೀವಂತವಾಗಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಗೆ ಗೆಹ್ಲೋಟ್ ಕಾರಣ ಎಂದು ಆರೋಪಿಸಿದ ಖರ್ಗೆ, ರಾಜ್ಯಪಾಲರು ಕೈಗೊಂಬೆಯೇ ಹೊರತು ಕರ್ನಾಟಕದ ಸಾಂವಿಧಾನಿಕ ಮುಖ್ಯಸ್ಥರಾಗಿಲ್ಲ. ದುರದೃಷ್ಟವಶಾತ್ ರಾಜ್ಯಪಾಲರ ಸ್ಥಾನಕ್ಕೆ ಧಕ್ಕೆ ಉಂಟಾಗಿದ್ದು, ಅವರು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments