ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 121 ಮಂದಿ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಉಪ ವಿಭಾಗೀಯ ಮಾಜಿಸ್ಟ್ರೇಟ್ ಸೇರಿದಂತೆ 6 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಸ್ವಯಂ ಘೋಷಿತ ಗುರು ಭೋಲೆ ಬಾಬಾ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರ 6 ಅಧಿಕಾರಿಗಳನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದೆ.
ಪ್ರಕರಣದ ಕುರಿತು ಎಸ್ ಐಟಿ ಪೊಲೀಸರು ಮಂಗಳವಾರ ಬೆಳಿಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ವರದಿ ನೀಡಿದ್ದು, ವರದಿ ಆಧರಿಸಿ ಜಿಲ್ಲಾ ಉಪ ವಿಭಾಗದ ಮ್ಯಾಜಿಸ್ಟ್ರೇಟ್, ತಹಸೀಲ್ದಾರ್, ಸರ್ಕಲ್ ಇನ್ ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.
ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಿಂದ ದುರಂತ ಸಂಭವಿಸಿದೆ ಎಂದು ಎಸ್ ಐಟಿ ವರದಿ ನೀಡಿದೆ.