Thursday, September 19, 2024
Google search engine
Homeತಾಜಾ ಸುದ್ದಿನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ

ನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ಎಂದು ತಿರುಗೇಟು ನೀಡಿದರು.

ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು  ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ  ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ವಾಗ್ದಾಳಿ ನಡೆಸಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಮೇಲಿನಂತೆ ಹೇಳಿಕೆ ನೀಡಿದ್ದರು.

ಇದಕ್ಕೆ ಖಾರವಾಗಿ ತಿರುಗೇಟು ಕೊಟ್ಟ ಸಚಿವರು;ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments