ಬೇಲಿಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳ ವಿರುದ್ಧದ ಆದೇಶವನ್ನು ಅಮಾನತಿನಲ್ಲಿಡುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ, ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಂತರ ಶಿಕ್ಷೆಯ ಜಾರಿಗೆ ತಡೆ ನೀಡಿದೆ.
ಅಕ್ರಮ ಅದಿರು ಸಾಗಾಟ ಸೇರಿದಂತೆ ೬ ಪ್ರಕರಣಗಳಲ್ಲಿ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿದಂತೆ ಹಲವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.
6 ವಾರದಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಠೇವಣಿ ಇಡಲು ಅಪರಾಧಿಗಳಿಗೆ ಸೂಚಿಸಿರುವ ಹೈಕೋರ್ಟ್, ಅಮಾನತಿನಲ್ಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನವೆಂಬರ್ 14 ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಶಾಸಕ ಸತೀಶ್ ಸೈಲ್ ಸೇರಿದಂತೆ ೭ ಅಪರಾಧಿಗಳಿಗೆ ಶಿಕ್ಷಿ ವಿಧಿಸಿ ತೀರ್ಪು ನೀಡಿತ್ತು.
ಒಟ್ಟು ಆರು ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ಗೆ 3ನೇ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿತ್ತು. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ವಿಧಿಸಿತ್ತು. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ನೀಡಲಾಗಿತ್ತು.