Home ಕಾನೂನು ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ಬಿಗ್ ರಿಲೀಫ್!

ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ಬಿಗ್ ರಿಲೀಫ್!

by Editor
0 comments
congress mla

ಬೇಲಿಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳ ವಿರುದ್ಧದ ಆದೇಶವನ್ನು ಅಮಾನತಿನಲ್ಲಿಡುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ, ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಂತರ ಶಿಕ್ಷೆಯ ಜಾರಿಗೆ ತಡೆ ನೀಡಿದೆ.

ಅಕ್ರಮ ಅದಿರು ಸಾಗಾಟ ಸೇರಿದಂತೆ ೬ ಪ್ರಕರಣಗಳಲ್ಲಿ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿದಂತೆ ಹಲವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.

6 ವಾರದಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಠೇವಣಿ ಇಡಲು ಅಪರಾಧಿಗಳಿಗೆ ಸೂಚಿಸಿರುವ ಹೈಕೋರ್ಟ್, ಅಮಾನತಿನಲ್ಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನವೆಂಬರ್ 14 ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

banner

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಶಾಸಕ ಸತೀಶ್​ ಸೈಲ್​​ ಸೇರಿದಂತೆ ೭ ಅಪರಾಧಿಗಳಿಗೆ ಶಿಕ್ಷಿ ವಿಧಿಸಿ ತೀರ್ಪು ನೀಡಿತ್ತು.

ಒಟ್ಟು ಆರು ಪ್ರಕರಣದಲ್ಲಿ ಶಾಸಕ ಸತೀಶ್​ ಸೈಲ್​​ಗೆ 3ನೇ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿತ್ತು. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ವಿಧಿಸಿತ್ತು. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ನೀಡಲಾಗಿತ್ತು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ Tirupati ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಕೇಳಿದಷ್ಟು ಸಿಗಲಿದೆ `ಲಡ್ಡು’