Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ರಾಹುಲ್ ಗಾಂಧಿ ರೀತಿ ಪರಮೇಶ್ವರ್ ಮಾತಾಡಿದರೆ ಹೇಗೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಛಾಟಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 41 ವೀಕ್ಷಣೆಗಳು
prahlad joshi
prahlad joshi

ನವದೆಹಲಿ: ಕರ್ನಾಟಕ ಗೃಹ ಮಂತ್ರಿ ಜಿ.ಪರಮೇಶ್ವರ ಪ್ರಜ್ಞಾವಂತ, ಪ್ರಬುದ್ಧ ರಾಜಕಾರಣಿ. ಅವರೂ ರಾಹುಲ್ ಗಾಂಧಿಯಂತೆ ಮಾತನಾಡಿದರೆ ಹೇಗೆ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ.

ದೆಹಲಿಯಲ್ಲಿ ಸೋಮವಾರ ಸಂಸತ್ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಮೇಶ್ವರ್ ಒಬ್ಬ ಪ್ರಬುದ್ಧ ರಾಜಕಾರಣಿ ಇದ್ದಾರೆ. ಅವರೂ ಹೀಗೆ ಇವಿಎಂ ಮೇಲೆ ಅನುಮಾನವಿದೆ ಎನ್ನುವುದು ಸರಿ ಕಾಣುವುದಿಲ್ಲ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 135 ಸೀಟುಗಳಿಂದ ಗೆದ್ದಾಗಲೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಇವರಿಗೆ ಆಗ ಇಲ್ಲದ ಇವಿಎಂ ಮೇಲಿನ ಅನುಮಾನ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಾಕ್ಷಣ ಬರುತ್ತದೆ ಎಂದರೆ ಹೇಗೆ? ಎಂದು ಪ್ರಶ್ನಿಸಿದರು.

ಪರಮೇಶ್ವರ್ ಹೇಳಿಕೆ ಅರ್ಥಹೀನ: ಮಹಾರಾಷ್ಟ್ರದಲ್ಲಿ ಇವಿಎಂ ಗೋಲ್ ಮಾಲ್ ಆಗಿದೆ ಎಂಬ ಗೃಹ ಸಚಿವ ಪರಮೇಶ್ವರ್ ಅವರ ಆರೋಪವನ್ನು ತಳ್ಳಿಹಾಕಿದ ಕೇಂದ್ರ ಸಚಿವ ಜೋಶಿ, ಇವಿಎಂ ದೋಷದಿಂದಲೇ ಮಹಾರಾಷ್ಟ್ರ ಚುನಾವಣೆಯನ್ನು ಕಾಂಗ್ರೆಸ್ ಸೋತಿದೆ ಎಂದಿರುವ ಅವರ ಹೇಳಿಕೆ ನಿಜಕ್ಕೂ ಅರ್ಥಹೀನ ಎಂದು ಅವರು ಟೀಕಿಸಿದರು.

ಜಾರ್ಖಂಡ್ ನಲ್ಲಿ ಹೇಗೆ ಗೆದ್ದಿತು? ಎಂದು ಪ್ರಶ್ನಿಸಿದ ಸಚಿವ ಜೋಶಿ, ಸೋತ ಕಾರಣಕ್ಕೆ ಈ ರೀತಿ ಅಪ್ರಬುದ್ಧರಂತೆ ಮಾತಾಡಬಾರದು. ರಾಜ್ಯ ರಾಜಕಾರಣದಲ್ಲಿ ಪರಮೇಶ್ವರ್ ಅವರು ಒಬ್ಬ ಗೌರವಾನ್ವಿತ ವರಿಷ್ಠರಾಗಿದ್ದರು. ಈಗ ಅವರೂ ರಾಹುಲ್ ಗಾಂಧಿ ಅವರಂತೆ ಮಾತನಾಡಲು ಆರಂಭಿಸಿದ್ದಾರೆ ಎಂದು ಪ್ರಹ್ಲಾದ ಜೋಶಿ ಟೀಕಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment