Monday, September 16, 2024
Google search engine
Homeತಾಜಾ ಸುದ್ದಿಸಿದ್ದರಾಮಯ್ಯ ಷಡ್ಯಂತ್ರ ಮುಂದುವರಿಸಿದರೆ ಹಿಂದುಳಿದ ವರ್ಗಗಳಿಂದ ರಾಜ್ಯಾದ್ಯಂತ ಸಮಾವೇಶ: ಕುರುಬ ಸಂಘ ಎಚ್ಚರಿಕೆ

ಸಿದ್ದರಾಮಯ್ಯ ಷಡ್ಯಂತ್ರ ಮುಂದುವರಿಸಿದರೆ ಹಿಂದುಳಿದ ವರ್ಗಗಳಿಂದ ರಾಜ್ಯಾದ್ಯಂತ ಸಮಾವೇಶ: ಕುರುಬ ಸಂಘ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ಧ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯ ರಾಜ್ಯದೆಲ್ಲೆಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಸಿದೆ.

ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಈರಣ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ಕಾರ್ಯಾಧ್ಯಕ್ಷ ಬಸವರಾಜ ಲ.ಬಸಲಿಗುಂದಿ ಸಿದ್ಧಾರಮಯ್ಯ ವಿರುದ್ಧ ಪಾದಯಾತ್ರೆಯ ಬೆದರಕೆ ಹಾಕಿದರೆ ಪರ್ಯಾಯವಾಗಿ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮ ಮತ್ತು ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಬಂದಾಕ್ಷಣ ತನಿಖಾ ಆಯೋಗ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು, ಈ ಹಿಂದೆಯೂ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜು ಅರಸು,  ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ,  ಧರಂಸಿಂಗ್ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು, ಈಗ ಸಮಸ್ತ ಹಿಂದುಳಿದ ಸಮುದಾಯಗಳು ಜಾಗೃತವಾಗಿವೆ, ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯನವರು ಬಡವರು,ಮಹಿಳೆಯರು, ರೈತರು, ಕಾರ್ಮಿಕರ ಪರ ಇರುವಂತೆ ಈ‌ ವರ್ಗಗಳು ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್  ಸರ್ಕಾರದ ಪರ ಬಂಡೆಯಂತೆ ನಿಂತಿವೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments