Home ಜಿಲ್ಲಾ ಸುದ್ದಿ ಯದುವೀರ್ ರಾಜಕೀಯಕ್ಕೆ ಪ್ರವೇಶಿಸಿದರೆ ಸಾರ್ವಜನಿಕ ಬಳಕೆಯ ಆಸ್ತಿ ಬಿಟ್ಟುಕೊಡಬೇಕಾಗುತ್ತೆ: ಪ್ರತಾಪ್ ಸಿಂಹ ಟಾಂಗ್

ಯದುವೀರ್ ರಾಜಕೀಯಕ್ಕೆ ಪ್ರವೇಶಿಸಿದರೆ ಸಾರ್ವಜನಿಕ ಬಳಕೆಯ ಆಸ್ತಿ ಬಿಟ್ಟುಕೊಡಬೇಕಾಗುತ್ತೆ: ಪ್ರತಾಪ್ ಸಿಂಹ ಟಾಂಗ್

by Editor
0 comments

ಮೈಸೂರು ರಾಜಮನೆತನದ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಯದುವೀರ್ ಒಡೆಯರ್ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಈಗಲೂ ಬಿಜೆಪಿಯಿಂದ ಟಿಕೆಟ್ ಪಡೆಯುವ ವಿಶ್ವಾಸದಲ್ಲಿದ್ದೇನೆ. ಒಂದು ವೇಳೆ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದರೂ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ನಾನು ರಿಯಲ್ ಎಸ್ಟೇಟ್ ಮಾಡ್ಲಿಲ್ಲ, ಕಮಿಷನ್ ಪಡೆದಿಲ್ಲ. ಭಟ್ಟಂಗಿಗಳನ್ನು ಕಟ್ಟಿಕೊಂಡು ಓಡಾಡಲಿಲ್ಲ. ಅಭಿವೃದ್ಧಿ ಮಾತ್ರ ಮಾಡಿದ್ದೇನೆ. ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡಲಿಲ್ಲ ಎಂದು ಪ್ರತಾಪ್ ಸಿಂಹ ನುಡಿದರು.

ಕಾರ್ಯಕರ್ತರೇ ನನ್ನ ದೊಡ್ಡ ಶಕ್ತಿ. ಯಾರು ತಲೆ ಕಡೆಸಿಕೊಳ್ಳಬೇಡಿ. ಗಟ್ಟಿ ಪಿಂಡ ನಾನು. ಯಾವ ಹಿನ್ನೆಲೆಯೂ ಇಲ್ಲದೆ ಇಲ್ಲಿ ತನಕ ಬಂದಿದ್ದೇನೆ. ನಾನು ಪಾರ್ಟಿಗೋಸ್ಕರ ಬಾವುಟ ಕಟ್ಟುತ್ತೇನೆ. ಕೈ ಮುಗಿದು ಬೇಡಿಕೊಳ್ಳುತ್ತೇನೆ, ಲೀಡರ್ ಗಳ ಹಿಂದೆ ಹೋಗಬೇಡಿ. ಪಕ್ಷದ ಜತೆ ಹೋಗಿ. ಅಪಪ್ರಚಾರ ಮಾಡಬೇಡಿ. ನಾನೇ ಆಗಲಿ ಮತ್ತೊಬ್ಬರೇ ಆಗಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಪ್ರತಾಪ್‌ ಸಿಂಹ ಮನವಿ ಮಾಡಿದರು.

banner

ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ಕೊಡಬೇಕೇ ಹೊರತು ನಾವು ಅವರ ಮನೆ ಕಾಯುವ ಸ್ಥಿತಿ ಬರಬಾರದು. ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದ್ರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆ. ಹೀಗಾಗಿ ಯದುವೀರ್ ಅವರನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯದುವೀರ್ ದೊಡ್ಡಗಡಿಯಾರದ ಬಳಿ ಬಿಜೆಪಿ ಕಾರ್ಯಕರ್ತರ ಜತೆ ಕುಳಿತು ಧಿಕ್ಕಾರ ಕೂಗುತ್ತಾರೆ. ರಾಜರಾಗಿದ್ದೂ ಪ್ರಜೆಯಾಗಲು ರೆಡಿ ಆಗಿದ್ದಾರೆ. ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತದೆ ಎಂದು ಪ್ರತಾಪ್‌ ಸಿಂಹ ಕೆಣಕಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ! ನೇಮಕಾತಿಯ ಮೆಸೇಜ್ ಸುಳ್ಳು, ನಂಬಬೇಡಿ: ಸಣ್ಣ ನೀರಾವರಿ ಇಲಾಖೆ ಸ್ಪಷ್ಟನೆ 2024ರಲ್ಲಿ ಹತ್ಯೆಯಾದ ಉಗ್ರರಲ್ಲಿ ಶೇ.60ರಷ್ಟು ಪಾಕಿಸ್ತಾನಿಯರು: ಸೇನಾ ಮುಖ್ಯಸ್ಥ ಉಪೇಂದ್ರ!