Home ತಾಜಾ ಸುದ್ದಿ ದಿಲ್ಲಿ ಅಸೆಂಬ್ಲಿ ಚುನಾವಣೆ: ಆಪ್‌ ಗೆ ಇಂಡಿಯಾ ಬಲ

ದಿಲ್ಲಿ ಅಸೆಂಬ್ಲಿ ಚುನಾವಣೆ: ಆಪ್‌ ಗೆ ಇಂಡಿಯಾ ಬಲ

ನವದೆಹಲಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನೇದಿನೆ ರಂಗೇರುತ್ತಿದೆ. ಈ ಮಧ್ಯೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಏರುವ ಅರವಿಂದ ಕೇಜ್ರಿವಾಲರ ಬಯಕೆಗೆ ಇಂಡಿಯಾ ಅಂಗ ಪಕ್ಷಗಳು ಬೆಂಬಲ ಸೂಚಿಸಿವೆ.

by Editor
0 comments
arvind kejriwal

ನವದೆಹಲಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನೇದಿನೆ ರಂಗೇರುತ್ತಿದೆ. ಈ ಮಧ್ಯೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಏರುವ ಅರವಿಂದ ಕೇಜ್ರಿವಾಲರ ಬಯಕೆಗೆ ಇಂಡಿಯಾ ಅಂಗ ಪಕ್ಷಗಳು ಬೆಂಬಲ ಸೂಚಿಸಿವೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ತಮ್ಮ ಪಕ್ಷವನ್ನು ಬೆಂಬಲಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬುಧವಾರ ಘೋಷಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹೊರತಾಗಿ ಇಂಡಿಯಾ ಬಣದ ಅಂಗಪಕ್ಷಗಳಾದ ಟಿಎಂಸಿ, ಶಿವಸೇನೆ ಮತ್ತು ಸಮಾಜವಾದಿ ಪಕ್ಷಗಳು ಆಪ್‌ಗೆಬೆಂಬಲ ಸೂಚಿಸಿವೆ.

ಇದಲ್ಲದೆ, ಶಿವಸೇನೆ (ಯುಬಿಟಿ) ಮುಂದಿನ ಕೆಲವು ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿಯನ್ನು ಬೆಂಬಲಿಸಿ ಪ್ರಚಾರ ಮಾಡಲು ಯೋಜಿಸುತ್ತಿದೆ. ಕೇಜ್ರಿವಾಲ್ ಅವರು ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

banner

ವಿಶೇಷವೆಂದರೆ, 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಜೊತೆ ಮೈತ್ರಿ ಮಾಡಿಕೊಂಡ ನಂತರ ಎಎಪಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಆಡಳಿತಾರೂಢ ಎಎಪಿ 2015 ಮತ್ತು 2020 ರ ಚುನಾವಣೆಯಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳೊಂದಿಗೆ ಜಯಗಳಿಸಿದೆ ಮತ್ತು ರಾಜಧಾನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಗುರಿ ಹೊಂದಿದೆ.

ಕಲ್ಯಾಣ ಯೋಜನೆಗಳ ಭರವಸೆಗಳೊಂದಿಗೆ ಜನರನ್ನು ದಾರಿತಪ್ಪಿಸಲಾಗುತ್ತಿದ್ದು, ಅರವಿಂದ್ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಿದ ನಂತರ ಕಾಂಗ್ರೆಸ್ ಅನ್ನು ಮೈತ್ರಿಕೂಟದಿಂದ ಹೊರಗಿಸುವಂತೆ ಆಪ್ ಇಂಡಿಯಾ ಘಟಕ ಪಕ್ಷಗಳಿಗೆ ಕರೆ ನೀಡಿದ್ದರು.

ಏತನ್ಮಧ್ಯೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಶ್‌ನ ಉನ್ನತ ನಾಯಕರು ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದಿಂದ ದೂರ ಉಳಿದಿರುವುದು ಕಾರ್‍ಯಕರ್ತರ ಉತ್ಸಾಹ ಕುಗ್ಗಿಸಿದೆ.

ಬದಲಾಗಿ, ಕಾಂಗ್ರೆಸ್ ಪ್ರಚಾರವು ಇತರ ರಾಜ್ಯಗಳಿಂದ ಕರೆತರಲಾದ ತನ್ನ ಎರಡನೇ ಹಂತದ ನಾಯಕರು ಮತ್ತು ಸಂಸದರ ಮೇಲೆ ಹೆಚ್ಚು ಅವಲಂಬಿತವಾಗಿದೆ.

70 ಸದಸ್ಯರ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಜ.11ರಿಂದ 3 ದಿನ ಅಯೋಧ್ಯೆ ರಾಮಮಂದಿರ ವಾರ್ಷಿಕೋತ್ಸವ: 100 ಗಣ್ಯರಿಗೆ ಆಹ್ವಾನ ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ದರೆ ಬ್ಯಾಂಕ್ ಗೆ ಬೀಳುತ್ತೆ ದಂಡ! SHOCKING: 69 ಉಗ್ರರಿರುವ ಜೈಲಿನಲ್ಲಿ ಹಾರಾಡಿದ ಡ್ರೋಣ್: 8 ದಿನಗಳ ನಂತರ ಪತ್ತೆ! 2 ಲಕ್ಷ ಬ್ಯಾಂಕ್ ಉದ್ಯೋಗಕ್ಕೆ ಕತ್ತರಿ ಹಾಕಲಿದೆ ಎಐ! ಹಾಡುಹಗಲೇ ಮಚ್ಚಿನಿಂದ ಕೊಚ್ಚಿ ಯುವತಿ ಕೊಲೆಗೈದ ಸಹದ್ಯೋಗಿ: ರಕ್ಷಿಸಲು ಬಾರದ ಜನ! ಮದ್ಯಪ್ರಿಯರಿಗೆ ಬಿಗ್ ಶಾಕ್: ಬಿಯರ್ ಬೆಲೆ ಸದ್ದಿಲ್ಲದೇ ಏರಿಕೆ! 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್ ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚಿಗೆ 5 ಮಂದಿ ಬಲಿ: ಊರು ಬಿಟ್ಟ 1,00,00 ಜನ!