Thursday, September 19, 2024
Google search engine
Homeಕ್ರೀಡೆಭಾರತಕ್ಕೆ 10 ವಿಕೆಟ್ ಜಯ, ಜಿಂಬಾಬ್ವೆ ವಿರುದ್ಧ 3-1ರಿಂದ ಸರಣಿ ವಶ

ಭಾರತಕ್ಕೆ 10 ವಿಕೆಟ್ ಜಯ, ಜಿಂಬಾಬ್ವೆ ವಿರುದ್ಧ 3-1ರಿಂದ ಸರಣಿ ವಶ

ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಭಾರತ ತಂಡ 10 ವಿಕೆಟ್ ಗಳಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ 3-1ರಿಂದ ಟಿ-20 ಸರಣಿಯನ್ನು ವಶಪಡಿಸಿಕೊಂಡಿದೆ.

ಹರಾರೆಯಲ್ಲಿ ಶನಿವಾರ ನಡೆದ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ಜಿಂಬಾಬ್ವೆ ತಂಡವನ್ನು 20 ಓವರ್ ಗಳಲ್ಲಿ 7 ವಿಕೆಟ್ ಗೆ 152 ರನ್ ಗಳಿಗೆ ನಿಯಂತ್ರಿಸಿತು. ಸುಲಭ ಗುರಿ ಬೆಂಬತ್ತಿದ ಭಾರತ ತಂಡ 15.2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಜಯಭೇರಿ ಬಾರಿಸಿತು.

ಯಶಸ್ವಿ ಜೈಸ್ವಾಲ್ 53 ಎಸೆತಗಳಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್ ಸೇರಿದಂತೆ 93 ರನ್ ಬಾರಿಸಿ ಔಟಾಗದೇ ಉಳಿದರೆ, ಶುಭಮನ್ ಗಿಲ್ 39 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 58 ರನ್ ಬಾರಿಸಿ ಅಜೇಯರಾಗಿ ಉಳಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ ನಾಯಕ ಸಿಕಂದರ್ ರಾಜ ಅವರ 46 ರನ್ ನೆರವಿನಿಂದ ಉತ್ತಮ ಮೊತ್ತ ದಾಖಲಿಸಿತು. ವೆಸ್ಲೆ ಮಡೆವೆರ್ (26) ಮತ್ತು ಟಡೆ ವನಶೆ ಮರುಮಾನಿ (32) ಉತ್ತಮ ಪ್ರದರ್ಶನ ನೀಡಿದರೆ ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments