Friday, September 20, 2024
Google search engine
Homeತಾಜಾ ಸುದ್ದಿಜಮ್ಮು ಕಾಶ್ಮೀರದಲ್ಲಿ 3 ಉಗ್ರರ ಹತ್ಯೆಗೈದ ಭಾರತೀಯ ಸೇನೆ!

ಜಮ್ಮು ಕಾಶ್ಮೀರದಲ್ಲಿ 3 ಉಗ್ರರ ಹತ್ಯೆಗೈದ ಭಾರತೀಯ ಸೇನೆ!

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ 2 ಪ್ರತ್ಯೇಕ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.

ಗುಪ್ತಚರ ಇಲಾಖೆಯ ಸ್ಪಷ್ಟ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು, ಆಗಸ್ಟ್ 24ರಿಂದ 29ರವರೆಗೆ ನಡೆದ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಭಾರತೀಯ ಸೇನೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments