ಗುಜರಾತ್ ರಾಜಧಾನಿ ಅಹಮದಾಬಾದ್ ನಲ್ಲಿ ಎಚ್ ಎಂವಿಪಿ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಂದೇ ದಿನ 3 ಪ್ರಕರಣಗಳು ಪತ್ತೆಯಾದಂತೆ ಆಗಿದೆ.
ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಎಚ್ ಎಂವಿಪಿ ವೈರಸ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅಹಮದಾಬಾದ್ ನಲ್ಲಿ 2 ತಿಂಗಳ ಮಗುವಿನ್ಲಲಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಪತ್ತೆಯಾಗುತ್ತಿರುವ ಎಚ್ ಎಂವಿಪಿ ವೈರಸ್ ಗೂ ಚೀನಾದಲ್ಲಿ ಅಬ್ಬರಿಸುತ್ತಿರುವ ಸೋಂಕಿಗೂ ಸಂಬಂಧವಿಲ್ಲ. ಇದು ಭಾರತದಲ್ಲೇ ಮೊದಲಿನಿಂದಲೂ ಇರುವ ವೈರಸ್ ಇದಾಗಿದ್ದು, ಇದು ಅಪಾಯಕಾರಿ ಅಲ್ಲ ಎಂದು ಹೇಳಲಾಗಿದೆ.
ಸಾಮಾನ್ಯವಾಗಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು ಹಾಗೂ ವೃದ್ಧರಲ್ಲಿ ಸಾಮಾನ್ಯವಾಗಿ ಚಳಿಗಾಲದಲ್ಲಿ ಸೋಂಕು ಕಾಣಿಸಿಕೊಳ್ಳುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.