ದೇಶದ ಸ್ವಚ್ಛ ನಗರಿ ಎಂ ಗೌರವಕ್ಕೆ ಪಾತ್ರವಾಗಿರುವ ಮಧ್ಯಪ್ರದೇಶದ ಇಂಧೋರ್ ಇದೀಗ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಟ್ಟು ವಿಶ್ವದಾಖಲೆಗೆ ಪಾತ್ರವಾಗಿದೆ.
ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಟ್ಟಿದ್ದಕ್ಕಾಗಿ ಭಾನುವಾರ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಗಿನ್ನಿಸ್ ಬುಕ್ ಆಫ್ ವರ್ಡ್ಸ್ ರೆಕಾರ್ಡ್ಸ್ ಪ್ರಮಾಣ ಪತ್ರ ಸ್ವೀಕರಿಸಿದರು.
ಇಂಧೋರ್ ನಗರವನ್ನು ಅತ್ಯಂತ ಸ್ವಚ್ಚವಾಗಿ ಇಟ್ಟುಕೊಳ್ಳಬೇಕು ಎಂದು ಜನರ ಶ್ರಮ ನಿಜಕ್ಕೂ ಮೆಚ್ಚುವಂತದ್ದು. ಇಂದು ನಾವು ದೇಶದಲ್ಲಿ ಮಾತ್ರವಲ್ಲ, ವಿಶ್ವದಲ್ಲೇ ಅತ್ಯಂತ ಸ್ವಚ್ಚ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದೇವೆ ಎಂದು ಗಿನ್ನೀಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕರಿಸಿ ಮೋಹನ್ ಯಾದವ್ ಸಂತಸ ವ್ಯಕ್ತಪಡಿಸಿದರು.
ಮಾತೃಭೂತಿ ಭೂಮಿಯನ್ನು ಸುರಕ್ಷತೆಯಿಂದ ನೋಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಹಕಾರ ಪ್ರಮುಖವಾಗಿದೆ ಎಂದು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ನುಡಿದರು.