ಬ್ರಿಟೀಷರ ವಿರುದ್ಧ ಯುದ್ದದಲ್ಲಿ ಜಯ ಸಾಧಿಸಿದ್ದ ವೀರ ರಾಣಿ ಕಿತ್ತೂರು ಚನ್ನಮ್ಮ ವಿಜಯೋತ್ಸವದ ದ್ವಿಶತಮಾನೋತ್ಸವ ಹಾಗೂ ತುಂಗಾರತಿ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಹ್ವಾನಿಸಿದರು.
ದೆಹಲಿಯಲ್ಲಿ ರಾಷ್ಟ್ರಪತಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಬೊಮ್ಮಾಯಿ, ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿ ಮಾಡಿ ಅಧಿಕೃತ ಆಹ್ವಾನ ನೀಡಿದರು. ಹರಿಹರ ಪಂಚಮಸಾಲಿ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಶ್ರೀಗಳ ನೇತೃತ್ವದ ನಿಯೋಗದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಉಪಸ್ಥಿತರಿದ್ದರು.
1824ರಲ್ಲಿ ಬ್ರಿಟೀಷರ ವಿರುದ್ದ ಹೋರಾಡಿ ಜಯಗಳಿಸಿದ್ದ ದೇಶದ ಪ್ರಥಮ ಮಹಿಳೆ ವೀರರಾಣಿ ಕಿತ್ತೂರು ಚನ್ನಮ್ಮ ಅವರ ವಿಜಯೋತ್ಸವ ಕಾರ್ಯಕ್ರಮವನ್ನು ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಆಯೋಜಿಸಿದ್ದು, ಈ ಐತಿಹಾಸಿಕ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುವಂತೆ ಮನವಿ ಮಾಡಿದರು.
2025 ರ ಜನೇವರಿ 14-15 ರಂದು ದಕ್ಷಿಣ ಗಂಗಾ ಎಂದು ಪ್ರಸಿದ್ದಿ ಪಡೆದಿರುವ ತುಂಗಭದ್ರಾ ನದಿ ದಡದಲ್ಲಿ ನಡೆಯುವ ತುಂಗಾರತಿ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊವಂತೆ ಮನವಿ ಮಾಡಿದ್ದಾರೆ.