Friday, September 20, 2024
Google search engine
Homeಕ್ರೀಡೆIPL 2024: ಕೆಕೆಆರ್ ಗೆ ಸುಲಭ ತುತ್ತಾದ ಲಕ್ನೋ ಸೂಪರ್ ಜೈಂಟ್ಸ್!

IPL 2024: ಕೆಕೆಆರ್ ಗೆ ಸುಲಭ ತುತ್ತಾದ ಲಕ್ನೋ ಸೂಪರ್ ಜೈಂಟ್ಸ್!

ಆರಂಭಿಕ ಫಿಲ್ ಸಾಲ್ಟ್ ಸಿಡಿಸಿದ ಅಬ್ಬರದ ಅರ್ಧಶತಕ ಹಾಗೂ ಬೌಲರ್ ಗಳ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳ ಭಾರೀ ಅಂತರದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ.

ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 20 ಓವರ್ ಗಳಲ್ಲಿ 7 ವಿಕೆಟ್ ಗೆ 161 ರನ್ ಗಳಿಗೆ ನಿಯಂತ್ರಿಸಿದ ಕೆಕೆಆರ್ ತಂಡ 15.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಕೆಕೆಆರ್ ತಂಡ 42 ರನ್ ಗೆ 2 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಆದರೆ ಸಾಲ್ಟ್ ಮತ್ತು ನಾಯಕ ಶ್ರೇಯಸ್ ಐಯ್ಯರ್ 120 ರನ್ ಗಳ ಸಿಡಿಲಬ್ಬರದ ಜೊತೆಯಾಟದಿಂದ ತಂಡವನ್ನು ಗೆಲುವಿನತ್ತ ಮುನ್ನಡೆದರು.

ಸಾಲ್ಟ್ 47 ಎಸೆತಗಳಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 89 ರನ್ ಬಾರಿಸಿ ಅಜೇಯರಾಗಿ ಉಳಿದರೆ, ಶ್ರೇಯಸ್ ಅಯ್ಯರ್ 38 ಎಸೆತಗಳಲ್ಲಿ 6 ಬೌಂಡರಿ ಸಹಾಯದಿಂದ 38 ರನ್ ಬಾರಿಸಿ ಔಟಾಗದೇ ಉಳಿದರು.

ಈ ಗೆಲುವಿನೊಂದಿಗೆ ಕೆಕೆಆರ್ 5 ಪಂದ್ಯಗಳಿಂದ 4 ಗೆಲುವು ಮತ್ತು 1 ಸೋಲಿನೊಂದಿಗೆ 8 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದರೆ, ಲಕ್ನೋ ಸೂಪರ್ ಜೈಂಟ್ಸ್ 6 ಪಂದ್ಯಗಳಿಂದ 3 ಜಯ ಹಾಗೂ 3 ಸೋಲಿನೊಂದಿಗೆ 6 ಅಂಕ ಗಳಿಸಿ 5ನೇ ಸ್ಥಾನಕ್ಕೆ ಕುಸಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments