Saturday, October 5, 2024
Google search engine
Homeಕ್ರೀಡೆಪಾವೊ ನುರ್ಮಿ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ

ಪಾವೊ ನುರ್ಮಿ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ

ವಿಶ್ವ ಚಾಂಪಿಯನ್ ಹಾಗೂ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಭಾರತದ ನೀರಜ್ ಚೋಪ್ರಾ ಪಾವೊ ನುರ್ಮಿ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಫಿನ್ ಲ್ಯಾಂಡ್ ನ ಟುರ್ಕುನಲ್ಲಿ ಮಂಗಳವಾರ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ 85.97 ಮೀ. ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದುಕೊಂಡರು. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ಗೆ ಭರ್ಜರಿ ತಯಾರಿ ನಡೆಸಿದರು.

ಸತತ 5 ಎಸೆತಗಳಲ್ಲಿ ನಿರಾಸೆ ಮೂಡಿಸಿದ್ದ ನೀರಜ್ ಚೋಪ್ರಾ 6ನೇ ಹಾಗೂ ಅಂತಿಮ ಎಸೆತದಲ್ಲಿ ಭರ್ಜರಿ ಪ್ರದರ್ಶನ ನೀಡಿ ಚಿನ್ನದ ಪದಕ ಖಚಿತಪಡಿಸಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments