Saturday, June 29, 2024
Google search engine
Homeಅಪರಾಧನಟ ದರ್ಶನ್ ಗೆ ನ್ಯಾಯಾಂಗ ಬಂಧನ; ಈಗ ಖೈದಿ ನಂಬರ್ 6101

ನಟ ದರ್ಶನ್ ಗೆ ನ್ಯಾಯಾಂಗ ಬಂಧನ; ಈಗ ಖೈದಿ ನಂಬರ್ 6101

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀರ ವಶದಲ್ಲಿರುವ ನಟ ದರ್ಶನ್ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧಕ್ಕೆ ನೀಡಲಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6101 ಸಂಖ್ಯೆ ನೀಡಲಾಗಿದೆ.

ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಶನಿವಾರ 24ನೇ ಎಸಿಎಂಎಂ ಕೋರ್ಟ್‍ಗೆ ಹಾಜರುಪಡಿಸಲಾಗಿತ್ತು.

ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಆರೋಪಿಗಳಾದ ದರ್ಶನ್, ವಿನಯ್, ಧನರಾಜ್ ಹಾಗೂ ಪ್ರದೋಶ್ ನನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗಾಗಲೇ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಜೈಲಿನಲ್ಲಿ ಇದ್ದಾರೆ.

ದರ್ಶನ್ ಹಾಗೂ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದ್ದು, ದರ್ಶನ್ ಗೆ ವಿಚಾರಣಾಧೀನ ಕೈದಿ ಸಂಖ್ಯೆ 6101 ನೀಡಲಾಗಿದೆ.

ರೋಪಿಗಳನ್ನು ಮೂರು ಬಾರಿ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಟ ದರ್ಶನ್ ಮನೆಯಲ್ಲಿ ಸಿಕ್ಕಂತಹ ಹಣದ ಬಗ್ಗೆ ವಿಚಾರಿಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದರು.

ಅಷ್ಟೊಂದು ಹಣ ಎಲ್ಲಿಂದ ಬಂತು? ಯಾವ ಅಕೌಂಟ್‍ನಿಂದ ಹಣ ಡ್ರಾ ಮಾಡಿದ್ರಿ? ಬೇರೆ ಯಾರಾದ್ರೂ ಹಣ ನೀಡಿದ್ರಾ? ಈ ಹಣಕ್ಕೆ ದಾಖಲೆಗಳು ಇದೆಯಾ? ಅಷ್ಟೊಂದು ಹಣ ಮನೆಯಲ್ಲಿ ಇಡಲು ಕಾರಣ ಏನು? ಹೀಗೆ ಅನೇಕ ಪ್ರಶ್ನೆಗಳನ್ನು ಕೇಳಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ದರ್ಶನ್ 13 ವರ್ಷಗಳ ಹಿಂದೆ ಪತ್ನಿ ವಿಜಯಲಕ್ಷ್ಮೀ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಲ್ಲಿ ಕೆಲವು ದಿನ ಜೈಲು ಶಿಕ್ಷೆ ಅನುಭವಿಸಿದ್ದು. ಆಗ ಖೈದಿ ನಂಬರ್ 8993 ಪಡೆದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments