Thursday, September 19, 2024
Google search engine
Homeಕ್ರೀಡೆಕಾರ್ತಿಕ್ `ವಿರಾಟ್’ ರನ್ ಹೊಳೆ: ಆರ್ ಸಿಬಿಗೆ 4 ವಿಕೆಟ್ ಗೆಲುವಿನ `ಹೋಳಿ’ಗೆ

ಕಾರ್ತಿಕ್ `ವಿರಾಟ್’ ರನ್ ಹೊಳೆ: ಆರ್ ಸಿಬಿಗೆ 4 ವಿಕೆಟ್ ಗೆಲುವಿನ `ಹೋಳಿ’ಗೆ

ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್ಭಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ತಂಡ 4 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಗೆ 176 ರನ್ ಸಂಪಾಸಿತು, ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆರ್ ಸಿಬಿ 4 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಕೊಹ್ಲಿ 49 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 77 ರನ್ ಸಿಡಿಸಿ ತಂಡಕ್ಕೆ ಅಗತ್ಯವಾದ ಆರಂಭ ನೀಡಿದರು. ಆದರೆ ಮತ್ತೊಂದು ತುದಿಯಲ್ಲಿ ಸತತವಾಗಿ ವಿಕೆಟ್ ಕಳೆದುಕೊಂಡ ಆರ್ ಸಿಬಿ ಸೋಲಿನ ದವಡೆಗೆ ಸಿಲುಕಿತ್ತು.

ಒಂದು ಹಂತದಲ್ಲಿ 130 ರನ್ ಗೆ 6 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಯಾದ ದಿನೇಶ್ ಕಾರ್ತಿಕ್ ಮತ್ತು ಮಹಿಪಾಲ್ ಲೊಮ್ರೊರ್ ಮುರಿಯದ 7ನೇ ವಿಕೆಟ್ ಗೆ 48 ರನ್ ಜೊತೆಯಾಟದಿಂದ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 28 ರನ್ ಚಚ್ಚಿದರೆ, ಲೊಮ್ರೊರ್ 8 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 17 ರನ್ ಬಾರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments