Home ತಾಜಾ ಸುದ್ದಿ ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

by Editor
0 comments
siddaramiah

ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕೆಪಿಎಸ್‌ ಸಿ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.
ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು.

ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್‌ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು.

banner

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.
ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಲಾಯಿತು.

ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಜಿ.ಪರಮೇಶ್ವರ, ಹೆಚ್.ಕೆ. ಪಾಟೀಲ, ಈಶ್ವರ್‌ ಖಂಡ್ರೆ, ಕೆ. ಸುಧಾಕರ್‌, ಡಾ. ಎಂ.ಸಿ. ಸುಧಾಕರ್‌, ಎನ್.ಎಸ್. ಬೋಸರಾಜು,, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅರೆಸ್ಟ್! ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು: 8 ಮಂದಿಗೆ ಗಾಯ ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ!