Home ತಾಜಾ ಸುದ್ದಿ ಮಂಡ್ಯದಿಂದ ಜೆಡಿಎಸ್ ಸ್ಪರ್ಧೆ: ಕುಮಾರಸ್ವಾಮಿ ಘೋಷಣೆ, ಸುಮಲತಾಗೆ ಬಿಗ್ ಶಾಕ್!

ಮಂಡ್ಯದಿಂದ ಜೆಡಿಎಸ್ ಸ್ಪರ್ಧೆ: ಕುಮಾರಸ್ವಾಮಿ ಘೋಷಣೆ, ಸುಮಲತಾಗೆ ಬಿಗ್ ಶಾಕ್!

by Editor
0 comments
hd kumarswamy

ಮಂಡ್ಯ, ಹಾಸನ ಮತ್ತು ಕೋಲಾರದಿಂದ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದ ಸುಮಲತಾ ಅಂಬರೀಷ್ ಗೆ ಆಘಾತ ಉಂಟಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ ಎಂದು ಅಧಿಕೃತವಾಗಿ ಘೋಷಿಸಿದರು.

ನಮ್ಮ ಉದ್ದೇಶ ಇರೋದು ಕಾಂಗ್ರೆಸ್ ಅವರು ಜೆಡಿಎಸ್ ಮುಗಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದು. ನಮ್ಮ ಸಹಕಾರ ಇರೋ ರೀತಿ ಬಿಜೆಪಿಯಿಂದಲೂ ಸಹಕಾರ ಇರಬೇಕು. ಅದನ್ನ ಸರಿ ಮಾಡೋ‌ ನಿಟ್ಟಿನಲ್ಲಿ ಕೆಲವು ಸೂಚನೆ ಬಿಜೆಪಿ ಅವರಿಗೆ ನೀಡಬೇಕು ಎಂಬ ಸಲಹೆ ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಎರಡು ಪಕ್ಷದ ನಾಯಕರ ಸಭೆಗಳು, ಚುನಾವಣೆ ಪ್ರಚಾರದಲ್ಲಿ ಎರಡು ಪಕ್ಷಗಳು ಹೇಗೆ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಹೇಗೆ ಕಾರ್ಯಕರ್ತರು ಕೆಲಸ ಮಾಡಬೇಕು ಅಂತ ಸಲಹೆ ಕೊಡಬೇಕು ಅಂತ ಹೇಳಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ಚುನಾವಣಾ ಉಸ್ತುವಾರಿಗಳು ಮತ್ತು ಜಿಲ್ಲಾ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

banner

18 ಕ್ಷೇತ್ರಗಳಲ್ಲಿ JDS ಮತಗಳಲ್ಲಿ ಶೇ.3ರಿಂದ 4ರಷ್ಟು ಬಿಜೆಪಿಗೆ ಸ್ವಿಂಗ್ ಆದರೆ 18 ಕ್ಷೇತ್ರ ಬಿಜೆಪಿ ಗೆಲ್ಲಲಿದೆ. ನಮ್ಮ ಪಕ್ಷದ ದುಡಿಮೆ ಬಿಜೆಪಿಗೆ ಅನುಕೂಲ ಆಗುತ್ತದೆ. ಇದನ್ನ ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಅಂತ ಹೇಳಿದ್ದಾರೆ. ಸರಿಯಾಗಿ ನಮ್ಮನ್ನ ಬಳಿಕೆ ಮಾಡಿಕೊಳ್ಳಲಿ. ಇಲ್ಲದೆ ಹೋದರೆ ಮುಂದೆ ಪೆಟ್ಟು ಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿ ಜವಾಬ್ದಾರಿ ಆಗಲಿದೆ ಎಂದು ಹೇಳಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ