Monday, May 11, 2026
Home ಕಾನೂನು ಅತ್ಯಾಚಾರಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಜೈಲು: ನ್ಯಾಯಾಲಯದಿಂದ ಐತಿಹಾಸಿಕ ಆದೇಶ

ಅತ್ಯಾಚಾರಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಜೈಲು: ನ್ಯಾಯಾಲಯದಿಂದ ಐತಿಹಾಸಿಕ ಆದೇಶ

by Vahini
0 comments
prajwal revanna

ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದೂ ಅಲ್ಲದೇ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಹಾಗೂ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನೇತೃತ್ವದ ಪೀಠ ಶುಕ್ರವಾರ ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದ್ದು, ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟ ಕಾಯ್ದಿರಿಸಿತ್ತು.

ಶನಿವಾರ ಪ್ರಜ್ವಲ್ ರೇವಣ್ಣ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರ ನಡುವೆ ಶಿಕ್ಷೆಯ ಪ್ರಮಾಣದ ಕುರಿತು ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ಸೆಕ್ಷನ್ 376 (2) (ಕೆ) ಸೆಕ್ಷನ್ ಮತ್ತು ಸೆಕ್ಷನ್ 376 (2) (ಎನ್) ಅಡಿಯಲ್ಲಿ  ಜೀವಾವಧಿ ಶಿಕ್ಷೆ ಜೊತೆಗೆ 5 ಲಕ್ಷ ರೂ. ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರ ಮೊತ್ತ ನೀಡುವಂತೆ ಸೂಚಿಸಿದೆ.

ಅತ್ಯಂತ ಕಿರಿಯ ವಯಸ್ಸಿಗೆ ಸಂಸದರಾದ ಪ್ರಜ್ವಲ್ ರೇವಣ್ಣ ದೌರ್ಜನ್ಯ ಖಂಡನೀಯ. ಸಂಸದ ಸ್ಥಾನ ದುರುಪಯೋಗ ಪಡಿಸಿಕೊಂಡಿರುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಕಠಿಣ ಶಿಕ್ಷೆ ನೀಡಬೇಕು ಎಂದು ವಕೀಲರಾದ ಬಿಎನ್ ಜಗದೀಶ್, ಅಶೋಕ್ ನಾಯಕ್ ಸರಕಾರದ ಪರ ವಾದ ಮಂಡಿಸಿದರು.

ಸಂಸದರಾಗಿ ಸಮಾಜಸೇವೆ ಮಾಡಿರುವ ಕಾರಣ ಅವರ ಸಮಾಜಸೇವೆಯನ್ನು ಗುರುತಿಸಿ ಶಿಕ್ಷೆಯ ಪ್ರಮಾಣ ಕಡಿಮೆ ಮಾಡಬೇಕು ಎಂದು ಪ್ರಜ್ವಲ್ ಪರ ವಕೀಲೆ ನಳಿನಾ ನ್ಯಾಯಾಧೀಶರಿಗೆ ಮನವಿ ಮಾಡಿದರು.

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign