3
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಳೆ ಸಂಜೆ 6 ಗಂಟೆಯಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.
ರಾಜ್ಯ ಸರ್ಕಾರ ಬುಧವಾರ ಸಂಜೆ 6 ಗಂಟೆಯಿಂದ 72 ಗಂಟೆಗಳ ಕಾಲ ಅಂದರೆ ಶುಕ್ರವಾರ ಸಂಜೆ 6 ಗಂಟೆಯರೆಗೆ ಮದ್ಯ ಮಾರಾಟ ನಿಷೇಧಿಸಿದೆ.
ಇದೇ ವೇಳೆ ಬೆಂಗಳೂರು ಮೂರು ವಿಧಾನಸಭಾ ಕ್ಷೇತ್ರಗಳನ್ನು ಸೂಕ್ಷ್ಮ ವಲಯ ಎಂದು ಪರಿಗಣಿಸಲಾಗಿದ್ದು, 13 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ 11 ಸಿಆರ್ ಪಿಎಫ್ ತುಕಡಿಗಳು ಸೇರಿವೆ.