Saturday, July 6, 2024
Google search engine
Homeತಾಜಾ ಸುದ್ದಿಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ: ಏಪ್ರಿಲ್ 19ರಂದು ಆರಂಭ, ಜೂನ್ 4 ಫಲಿತಾಂಶ

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ: ಏಪ್ರಿಲ್ 19ರಂದು ಆರಂಭ, ಜೂನ್ 4 ಫಲಿತಾಂಶ

ಲೋಕಸಭಾ ಚುನಾವಣೆ 2024 ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19ರಂದು ಆರಂಭಗೊಳ್ಳಲಿದ್ದು, 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4ಂರದು ಫಲಿತಾಂಶ ಹೊರಬೀಳಲಿದೆ.

ಕೇಂದ್ರ ಚುನಾವಣಾಧಿಕಾರಿ ರಾಜೀವ್ ಕುಮಾರ್ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಲೋಕಸಭಾ ಚುನಾವಣಾ ದಿನಾಂಕ ಘೋಷಿಸಿದರು.

543 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 7 ಹಂತಗಳಲ್ಲಿ ಚುನಾವಣೆ ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಜೂನ್ 1ರಂದು 7ನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ ಜೊತೆಗೆ ಕರ್ನಾಟಕ ಸೇರಿದಂತೆ ವಿವಿಧ ವಿಧಾಸಭಾ ಸ್ಥಾನ ಹಾಗೂ 4 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ.

ಸಿಕ್ಕಿಂ, ಅರುಣಾಚಲ ಪ್ರದೇಶಗಳಲ್ಲಿ ಏಪ್ರಿಲ್ 19ರಂದು, ಒಡಿಶಾದಲ್ಲಿ ಮೇ 13 ಮತ್ತು 20ರಂದು ಎರಡು ಹಂತಗಳಲ್ಲಿ ಆಂಧ್ರಪ್ರದೇಶದಲ್ಲಿ ಮೇ 13ರಂದು ಮತದಾನ ಮತ್ತು ನಡೆಯಲಿದೆ.

ಇದೇ ವೇಳೆ ಕರ್ನಾಟಕ, ಮಹಾರಾಷ್ಟ್ರ, ತ್ರಿಪುರ, ತೆಲಂಗಾಣ, ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments