ಲೋಕಸಭೆಯ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ಒಂದು ತಿಂಗಳ ಕಾಲ ನಡೆಯಲಿದೆ.
ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಸಂವಿಧಾನ ಅಂಗೀಕರಿಸಿ 75ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಆಚರಿಸಲಾಗುವುದು ಎಂದು ತಿಳಿಸಿದರು.
ಜಮ್ಮು ಕಾಶ್ಮೀರ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದ ನಂತರ ನಡೆಯುತ್ತಿರುವ ಮೊದಲ ಲೋಕಸಭೆ ಅಧಿವೇಶನ ಇದಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ವಕ್ಫ್ ಮಸೂದೆ, ಒಂದು ದೇಶ, ಒಂದು ಚುನಾವಣೆ ಸೇರಿದಂತೆ ಹಲವು ಮಹತ್ವದ ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ.