Home ತಾಜಾ ಸುದ್ದಿ Lokayukta Raid ಲೋಕಾಯುಕ್ತ ದಾಳಿ: 4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

Lokayukta Raid ಲೋಕಾಯುಕ್ತ ದಾಳಿ: 4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

by Editor
0 comments
lokayukta raid

ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸುವ ಮೂಲಕ ಶಾಕ್ ನೀಡಿದರೆ, ಈ ಅಧಿಕಾರಿಗಳ ಮನೆಯಲ್ಲಿ ಪತ್ತೆಯಾದ ಅಕ್ರಮ ಸಂಪತ್ತು ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.ಗುರುವಾರ ಮುಂಜಾನೆ ನಾಲ್ವರು ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ

ಸೇರಿದಂತೆ ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ೨೫ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ ತಿಪ್ಪೇಸ್ವಾಮಿ, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮತ್ತು ಅಬಕಾರಿ ಎಸ್ಪಿ ಮೋಹನ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ದಾವಣಗೆರೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಪ್ರಭು ನೇತ್ರತ್ವದ ತಂಡ ತಿಪ್ಪೇಸ್ವಾಮಿ ಪತ್ನಿಯ ತವರು ಮನೆಯಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

banner

ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದ ತಂಡ ತಿಪ್ಪೇಸ್ವಾಮಿಯವರ ಬೆಂಗಳೂರು ಗಿರಿನಗರದಲ್ಲಿರುವ ಬಂಗಲೆ ಮೇಲೆ ದಾಳಿ ಮಾಡಲಾಗಿದ್ದು, ಅಪಾರ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ತೂಕ ಹಾಕಲು ಲೋಕಾ ಅಧಿಕಾರಿಗಳು ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗನನ್ನು ಕರೆಸಿದ್ದಾರೆ.

ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಅವರ ಮೈಸೂರು, ಬೆಂಗಳೂರು, ಮಂಡ್ಯದ ಮಳವಳ್ಳಿಯಲ್ಲಿರುವ ಮನೆಗಳು ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೆಆರ್ಎಸ್ನಲ್ಲಿ ಮಹೇಶ್ ಪತ್ನಿ ಮಾಲೀಕತ್ವದ ಪೆಟ್ರೋಲ್ ಬಂಕ್ ಮೇಲೂ ದಾಳಿ ನಡೆದಿದೆ. ದಾಖಲೆಗಳು, ನಗದು ಹಾಗೂ ಚಿನ್ನಾಭರಣಗಳು ಸಿಕ್ಕಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದ ತಂಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯ ದಲ್ಲಿರುವ ಮನೆ ಹಾಗೂ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದೆ. 2 ತಿಂಗಳ ಹಿಂದೆಯಷ್ಟೇ ಕೃಷ್ಣವೇಣಿ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದರು.

ಅಬಕಾರಿ ಎಸ್ಪಿ ಮೋಹನ್ ಅವರ ವಾಜರಹಳ್ಳಿಯ ವಿಲ್ಲಾದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಸತತ 4 ಗಂಟೆಗಳಿಂದ ತಲಾಷ್ ನಡೆಸುತ್ತಿದೆ. ಮೋಹನ್ ಮನೆ ಮೇಲೆ 15 ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೇ ಮೋಹನ್ ಸರ್ಕಾರಿ ವಾಹನದಲ್ಲಿದ್ದ ದಾಖಲಾತಿ ವಶಕ್ಕೆ ಪಡೆದಿದ್ದಾರೆ. ಮೋಹನ್ ಪತ್ನಿಯನ್ನು ಅಧಿಕಾರಿಗಳು ಬ್ಯಾಂಕ್ಗೆ ಕರೆದೊಯ್ದು ದಾಖಲೆ ಸಂಗ್ರಹಕ್ಕೆ ಮುಂದಾಗಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ಶುಕ್ರವಾರಕ್ಕೆ ಮುಂದೂಡಿಕೆ ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ ಮಾಸಾಂತ್ಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾಪರ್ಣೆ: ಡಾ.ಶರಣಪ್ರಕಾಶ್ ಪಾಟೀಲ್ 1,10,000 ಕೋಟಿ ರೂ. ತೆರಿಗೆ ಸಂಗ್ರಹಿಸಿ ದಾಖಲೆ ಬರೆದ ಕರ್ನಾಟಕ! IRCTC ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ರೈಲು ವಿಳಂಬವಾದರೆ ಉಚಿತ ಆಹಾರ! ವಿರಾಟ್ ಕೊಹ್ಲಿ 2ನೇ ಟೆಸ್ಟ್ ನಿಂದ ಹೊರಗೆ? ಅನುಮಾನ ಮೂಡಿಸಿದ ಕಾಲಿನ ಬ್ಯಾಂಡೇಜ್! ಟಿ-20ಯಲ್ಲಿ ಅತ್ಯಂತ ವೇಗದ `ಡಬಲ್' ಶತಕದ ವಿಶ್ವದಾಖಲೆ ಬರೆದ ಉರ್ವಿಲ್ ಪಟೇಲ್! ಕುತ್ತಿಗೆಗೆ ಬೋರ್ಡ್ ನೇತಾಕಿಕೊಂಡು ದೇವಸ್ಥಾನದಲ್ಲಿ ತಟ್ಟೆ ತೊಳೆದ ಪಂಜಾಬ್ ಮಾಜಿ ಡಿಸಿಎಂ! ನಿರ್ಮಲಾ ಸೀತಾರಾಮನ್, ಕಟೀಲ್ ಗೆ ಬಿಗ್ ರಿಲೀಫ್:  ಚುನಾವಣಾ ಅಕ್ರಮ ಸುಲಿಗೆ ಪ್ರಕರಣ ರದ್ದು! ‘ಮೇಷ್ಟ್ರು’ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!