6 ಮಂದಿ ಒತ್ತೆಯಾಳುಗಳ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಇಬ್ಬರು ಸಚಿವರು ಹಾಗೂ ಮೂವರು ಶಾಸಕರ ಮನೆ ಮೇಲೆ ದಾಳಿ ನಡೆಸಿದ ಘಟನೆ ಮಣಿಪುರದಲ್ಲಿ ನಡೆದಿದೆ.
ಜಿರಿಬಮ್ ಜಿಲ್ಲೆಯಲ್ಲಿ ಒತ್ತೆಯಾಳುಗಳ ಹತ್ಯೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ರಾಜಧಾನಿ ಇಂಫಾಲದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಜನಪ್ರತಿನಿಧಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಆರೋಗ್ಯ ಸಚಿವ ಸಪಮ್ ರಂಜನ್ ಮೇಲೆ ದಾಳಿ ಮಾಡಲಾಗಿದ್ದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪುತ್ರ ಹಾಗೂ ಬಿಜೆಪಿ ಶಾಸಕ ಆರ್ ಕೆ ಇವೊ ಅವರ ಮುಂದೆ ನೆರದ ಪ್ರತಿಭಟನಾಕಾರರು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪಟ್ಟು ಹಿಡಿದಿದ್ದಾರೆ.
ಇಂಫಾಲದಲ್ಲಿ ನಡೆದ ದಾಳಿ ಹಿನ್ನೆಲೆಯಲ್ಲಿ ಇಂಫಾಲ ಪೂರ್ವ, ಬಿಶ್ನಾಪುರ್, ತೌಬಾಲ್, ಕಕ್ಚಿಂಗ್, ಕಂಗ್ ಪೊಪ್ಕಿ ಮತ್ತು ಚೌರಾಚಾಂದ್ ಪುರ್ ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ ರದ್ದುಪಡಿಸಲಾಗಿದೆ.