Home ಜಿಲ್ಲಾ ಸುದ್ದಿ ರಾಜ್ಯದ 3 ವಿಧಾನಸಭೆ ಉಪಚುನಾವಣೆ: ಚನ್ನಪಟ್ಟಣದಲ್ಲಿ ಗರಿಷ್ಠ ಶೇ.48.15 ಮತದಾನ!

ರಾಜ್ಯದ 3 ವಿಧಾನಸಭೆ ಉಪಚುನಾವಣೆ: ಚನ್ನಪಟ್ಟಣದಲ್ಲಿ ಗರಿಷ್ಠ ಶೇ.48.15 ಮತದಾನ!

by Editor
0 comments
vote

ರಾಜ್ಯದ ಮೂರು ವಿಧಾನಸಭೆಗಳಿಗೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಮತದಾರರು ಹುರುಪಿನಿಂದ ಮತದಾನ ಮಾಡುತ್ತಿದ್ದು, ಭಾರೀ ಕುತೂಹಲ ಕೆರಳಿಸಿರುವ ಚನ್ನಪಟ್ಟಣದಲ್ಲಿ ಹೆಚ್ಚು ಮತದಾನ ಆಗಿದೆ.

ಮಧ್ಯಾಹ್ನ 1 ಗಂಟೆಗೆ ಚುನಾವಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಶಿಗ್ಗಾವಿಯಲ್ಲಿ ಶೇ.43.50 ಸಂಡೂರಿನಲ್ಲಿ ಶೇ. 47 ಮತ್ತು ಚನ್ನಪಟ್ಟಣದಲ್ಲಿ ಶೇ. 48.15ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದರೂ ಮಧ್ಯಾಹ್ನ 11 ಗಂಟೆಯಿಂದ ಮತದಾರರು ಮತಗಟ್ಟೆಯಿಂದ ಹೊರಗೆ ಬಂದು ಹೆಚ್ಚು ಮತ ಚಲಾಯಿಸುತ್ತಿದ್ದಾರೆ.

ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ ಯಾಸಿರ್ ಅಹ್ಮದ್ ಪಠಾಣ್ ಸ್ಪರ್ಧೆ ನೀಡಲಿದ್ದಾರೆ.

banner

ಸಂಡೂರಿನಲ್ಲಿ ಇ.ತುಕಾರಾಂ ಪತ್ನಿ ಈ.ಅನ್ನಪೂರ್ಣ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರೆ, ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಬಂಗಾರು ಹನುಮಂತು ಕಣಕ್ಕಿಳಿದಿದ್ದಾರೆ.

ಭಾರೀ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಸಿಪಿ ಯೋಗೇಶ್ವರ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಯೋಗೇಶ್ವರ್ ಮತ್ತು ಸತತ ಎರಡು ಚುನಾವಣೆಯಲ್ಲೂ ಸೋಲುಂಡಿರುವ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ