Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

ರಾಜ್ಯದ 7 ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಚಲುವರಾಯಸ್ವಾಮಿ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
chaluvaraya swamy

ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, ಕೃಷಿಕರಿಗೆ ಯೋಜಿತ ತರಬೇತಿ ನೀಡಿ‌ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದರು.

ಇಲಾಖೆಯಲ್ಲಿ ತರಬೇತಿ ಹಾಗೂ ಗುಣ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ ಮಾನ್ಯತೆಗೆ ಒಳಪಡಿಸಲಾಗುವುದು. ಬೈಲಹೊಂಗಲ ಪರತಂತ್ರ ಜೀವಿ ಪ್ರಯೋಗಾಲಯ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯ ವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಸಿದ ಕೃಷಿ ಸಚಿವರು ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು.

ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸುವಂತೆ ಚಲುವರಾಯ ಸ್ವಾಮಿ ಸಲಹೆ ನೀಡಿದರು.

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ , ಜವಾಬ್ದಾರಿಯುತವಾಗಿ ಕೆಲಸ ಮಾಡಿ. ರೈತರನ್ನು ಅನಗತ್ಯವಾಗಿ‌ ಅಲೆದಾಡಿಸಬೇಡಿ.
ಸಕಾಲದಲ್ಲಿ ‌ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಅವರು ಕಿವಿ ಮಾತು ಹೇಳಿದರು.

ಬಿತ್ತನೆ ಬೀಜ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲ ಇಲ್ಲದಂತೆ ವಿತರಣೆಮಾಡಿ. ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ ಎಂದು ನಿರ್ದೇಶನ‌ ನೀಡಿದರು.

ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ಸಚಿವರು ತಿಳಿಸಿದರು.

ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ , ನೊಂದಣಿ ಜಾಸ್ತಿ ‌ಮಾಡಿ , ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನಹರಿಸಿ.
ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ ಎಂದು ಸಚಿವ ಎನ್. ಚಲುವರಾಯಸ್ವಾಮಿ ಸಲಹೆ ನೀಡಿದರು.

ಹೈಟೆಕ್ ಹಾರ್ವೆಸ್ಟ್‌ ಹಬ್ ,ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದ ಅವರು, ಸುಸ್ಥಿರ ,ಸಮಗ್ರ ಕೃಷಿ ಬಗ್ಗೆ ತರಬೇತಿ, ಮಾರ್ಗದರ್ಶನ ನೀಡಿ ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಿ ಎಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತರಾದ ಗಿರೀಶ್, ನಿರ್ದೇಶಕರಾದ ಪದ್ಮಯ್ಯ ನಾಯಕ್,ಕೃಷಿ ನಿರ್ದೇಶಕರಾದ ಡಾ ಜಿ.ಟಿ ಪುತ್ರ ಅಪರ ನಿರ್ದೇಶಕರಾಸ ವೆಂಕಟರಮಣ ರೆಡ್ಡಿ ಮತ್ತಿತರರು ಈ‌ ಸಂದರ್ಭದಲ್ಲಿ ಹಾಜರಿದ್ದರು

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment