Friday, October 18, 2024
Google search engine
Homeಜಿಲ್ಲಾ ಸುದ್ದಿದಾಖಲೆ ವಿದ್ಯುತ್ ಉತ್ಪಾದನೆ: ಅಧಿಕಾರಿಗಳಿಗೆ ಸಚಿವ ಜಾರ್ಜ್ ಪ್ರಶಂಸೆ

ದಾಖಲೆ ವಿದ್ಯುತ್ ಉತ್ಪಾದನೆ: ಅಧಿಕಾರಿಗಳಿಗೆ ಸಚಿವ ಜಾರ್ಜ್ ಪ್ರಶಂಸೆ

ಆರ್ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮವನ್ನು ಪ್ರಶಂಸನೀಯ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

ರಾಯಚೂರಿನಲ್ಲಿ ಬುಧವಾರ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು, ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2000 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಏಪ್ರಿಲ್ ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು, ಇದು ದಾಖಲೆಯಾಗಿದೆ ಎಂದರು.

ಆರ್ಟಿಪಿಎಸ್ವಿದ್ಯುತ್ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್ಸಾಮರ್ಥ್ಯದ 3ನೇ ವಿದ್ಯುತ್ಘಟಕದಲ್ಲಿ ಏಪ್ರಿಲ್‌ 4ರಂದು 216 ಮೆಗಾವ್ಯಾಟ್ಉತ್ಪಾದನೆ ಮಾಡಲಾಗಿದ್ದು, ಮೂಲಕ ಇತಿಹಾಸ ಬರೆಯಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್ಟಿಪಿಎಸ್ ಏಳು ವಿದ್ಯುತ್ಘಟಕಗಳು ಸೇರಿ ಶೇ. 85ರಷ್ಟು ವಿದ್ಯುತ್ಉತ್ಪಾದಿಸಿವೆ ಎಂದು ಅವರು ವಿವರಿಸಿದರು.

ಯರಮರಸ್ಶಾಖೋತ್ಪನ್ನ ವಿದ್ಯುತ್ಕೇಂದ್ರ (ವೈಟಿಪಿಎಸ್‌) 2023-24 ಹಣಕಾಸು ವರ್ಷದಲ್ಲಿ 6229.250 ಮಿ.ಯೂ. ಉತ್ಪಾದಿಸಿದೆ. ಇದು ಈವರೆಗಿನ ಗರಿಷ್ಠ ಉತ್ಪಾದನೆ. ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ 6000 ಮಿ.ಯೂ. ಗುರಿಯನ್ನು ವೈಟಿಪಿಎಸ್ಮೀರಿದೆ. ಇನ್ನು ಬಳ್ಳಾರಿ ಉಷ್ಣ ವಿದ್ಯುತ್ಸ್ಥಾವರ 8208.476 ಮಿ.ಯೂ ವಿದ್ಯುತ್ಉತ್ಪಾದಿಸಿದೆ. ಸ್ಥಾವರ ಕಾರ್ಯಾರಂಭ ಮಾಡಿದ ನಂತರ ಸಾಧಿಸಿದ ಅತ್ಯಧಿಕ ಉತ್ಪಾದನೆಯ ದಾಖಲೆ ಇದಾಗಿದೆ ಎಂದು ಜಾರ್ಜ್ ಹೇಳಿದರು.

ಆರ್ಟಿಪಿಎಸ್, ಒಂದನೇ ಘಟಕ ತೀರಾ ಹಳೆಯದು ಎಂಬ ಕಾರಣಕ್ಕೆ ಮುಚ್ಚುವುದಿಲ್ಲ. ಕುರಿತು ಊಹಾಪೋಹ ಅಷ್ಟ. ಆದರೆ ನಾವು ಈಗಾಗಲೇ ಕೆಪಿಸಿ ಬೋರ್ಡ್ ಮೀಟಿಂಗಲ್ಲಿ ತೀರ್ಮಾನ ತಗೊಂಡಿದೀವಿಅದನ್ನ ಸರಿ ಮಾಡಲು ಅಗತ್ಯಹಣ ಬಿಡುಗಡೆಗೂ ನಿರ್ಧರಿಸಲಾಗಿದೆ ಎಂದು ಹೇಳಿದರು.

ಕಲ್ಲಿದ್ದಲು ಕೊರತೆ ಇಲ್ಲ

ನಮ್ಮ ಸರ್ಕಾರ ಬಂದ ಮೇಲೆ ಕಲ್ಲಿದ್ದಲು ಸಮಸ್ಯೆ ಇಲ್ಲದಂತೆ ನೋಡಕೊಂಡಿದ್ದೇವೆ. ಒಂದು ತಿಂಗಳಿಗೆ ಬೇಕಾದ ಕಲ್ಲಿದ್ದಲು ಸಂಗ್ರಹದಲ್ಲಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದ 3 ಕಲ್ಲಿದ್ದಲು ಘಟಕಗಳಿಂದ ಕಲ್ಲಿದ್ದಲು ಬರುತ್ತಿದೆ. ಕ್ಯಾಪ್ಟಿವ್ ಮೈನಿಂಗ್ನಿಂದಲೂ ಕಲ್ಲಿದ್ದಲು ಬರ್ತಿದೆ. ಪ್ರಸ್ತುತ 14 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಸಚಿವರು ವಿವರ ನೀಡಿದರು.

ಸಭೆಯಲ್ಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಹಂಪಯ್ಯನಾಯಕ್, ಮಾನಪ್ಪ ವಜ್ಜಲ್, ಬಸವರಾಜ್ ತುರುವಿನಹಾಳ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ಕುಮಾರ್ಪಾಂಡೆ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments