Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಜಿಲ್ಲಾ ಸುದ್ದಿ

ದಾಖಲೆ ವಿದ್ಯುತ್ ಉತ್ಪಾದನೆ: ಅಧಿಕಾರಿಗಳಿಗೆ ಸಚಿವ ಜಾರ್ಜ್ ಪ್ರಶಂಸೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು

ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್‌ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮವನ್ನು ಪ್ರಶಂಸನೀಯ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

ರಾಯಚೂರಿನಲ್ಲಿ ಬುಧವಾರ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು, ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2000 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಏಪ್ರಿಲ್ ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು, ಇದು ದಾಖಲೆಯಾಗಿದೆ ಎಂದರು.

ಆರ್‌ಟಿಪಿಎಸ್‌ ವಿದ್ಯುತ್‌ ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್‌ ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್‌ ಸಾಮರ್ಥ್ಯದ 3ನೇ ವಿದ್ಯುತ್‌ ಘಟಕದಲ್ಲಿ ಏಪ್ರಿಲ್‌ 4ರಂದು 216 ಮೆಗಾವ್ಯಾಟ್‌ ಉತ್ಪಾದನೆ ಮಾಡಲಾಗಿದ್ದು, ಆ ಮೂಲಕ ಇತಿಹಾಸ ಬರೆಯಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್‌ಟಿಪಿಎಸ್‌ನ ಏಳು ವಿದ್ಯುತ್‌ ಘಟಕಗಳು ಸೇರಿ ಶೇ. 85ರಷ್ಟು ವಿದ್ಯುತ್‌ ಉತ್ಪಾದಿಸಿವೆ ಎಂದು ಅವರು ವಿವರಿಸಿದರು.

ಯರಮರಸ್‌ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ವೈಟಿಪಿಎಸ್‌) 2023-24 ಹಣಕಾಸು ವರ್ಷದಲ್ಲಿ 6229.250 ಮಿ.ಯೂ. ಉತ್ಪಾದಿಸಿದೆ. ಇದು ಈವರೆಗಿನ ಗರಿಷ್ಠ ಉತ್ಪಾದನೆ. ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ 6000 ಮಿ.ಯೂ. ಗುರಿಯನ್ನು ವೈಟಿಪಿಎಸ್‌ ಮೀರಿದೆ. ಇನ್ನು ಬಳ್ಳಾರಿ ಉಷ್ಣ ವಿದ್ಯುತ್‌ ಸ್ಥಾವರ 8208.476 ಮಿ.ಯೂ ವಿದ್ಯುತ್‌ ಉತ್ಪಾದಿಸಿದೆ. ಸ್ಥಾವರ ಕಾರ್ಯಾರಂಭ ಮಾಡಿದ ನಂತರ ಸಾಧಿಸಿದ ಅತ್ಯಧಿಕ ಉತ್ಪಾದನೆಯ ದಾಖಲೆ ಇದಾಗಿದೆ ಎಂದು ಜಾರ್ಜ್ ಹೇಳಿದರು.

ಆರ್‌ಟಿಪಿಎಸ್, ಒಂದನೇ ಘಟಕ ತೀರಾ ಹಳೆಯದು ಎಂಬ ಕಾರಣಕ್ಕೆ ಮುಚ್ಚುವುದಿಲ್ಲ. ಈ ಕುರಿತು ಊಹಾಪೋಹ ಅಷ್ಟ. ಆದರೆ ನಾವು ಈಗಾಗಲೇ ಕೆಪಿಸಿ ಬೋರ್ಡ್ ಮೀಟಿಂಗಲ್ಲಿ ತೀರ್ಮಾನ ತಗೊಂಡಿದೀವಿ‌ ಅದನ್ನ ಸರಿ ಮಾಡಲು ಅಗತ್ಯಹಣ ಬಿಡುಗಡೆಗೂ ನಿರ್ಧರಿಸಲಾಗಿದೆ ಎಂದು ಹೇಳಿದರು.

ಕಲ್ಲಿದ್ದಲು ಕೊರತೆ ಇಲ್ಲ

ನಮ್ಮ ಸರ್ಕಾರ ಬಂದ ಮೇಲೆ ಕಲ್ಲಿದ್ದಲು ಸಮಸ್ಯೆ ಇಲ್ಲದಂತೆ ನೋಡಕೊಂಡಿದ್ದೇವೆ. ಒಂದು ತಿಂಗಳಿಗೆ ಬೇಕಾದ ಕಲ್ಲಿದ್ದಲು ಸಂಗ್ರಹದಲ್ಲಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದ 3 ಕಲ್ಲಿದ್ದಲು ಘಟಕಗಳಿಂದ ಕಲ್ಲಿದ್ದಲು ಬರುತ್ತಿದೆ. ಕ್ಯಾಪ್ಟಿವ್ ಮೈನಿಂಗ್‌ನಿಂದಲೂ ಕಲ್ಲಿದ್ದಲು ಬರ್ತಿದೆ. ಪ್ರಸ್ತುತ 14 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಸಚಿವರು ವಿವರ ನೀಡಿದರು.

ಸಭೆಯಲ್ಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಹಂಪಯ್ಯ‌ ನಾಯಕ್, ಮಾನಪ್ಪ ವಜ್ಜಲ್, ಬಸವರಾಜ್ ತುರುವಿನಹಾಳ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment