Home ಜಿಲ್ಲಾ ಸುದ್ದಿ ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ

by Editor
0 comments
eshwar khandre

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 9ರಂದು ದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದರು.

ಮಹದಾಯಿ ನದಿಯ ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರ್ಕಾರ ತಕರಾರು ಮಾಡುತ್ತದೆ. ಆದರೆ, 2018ರ ಆಗಸ್ಟ್ 14ರಂದು ಮಹಾದಾಯಿ ನದಿ ನೀರು ವಿವಾದ ನ್ಯಾಯಾಧಿಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರೀಯ ಜಲ ಆಯೋಗ 2022ರ ಡಿಸೆಂಬರ್ 29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯದೊಂದಿಗೆ ಕುಡಿಯುವ ನೀರಿನ ಯೋಜನೆಗಳ ಸಂಬಂಧ ಸುಪ್ರೀಂಕೋರ್ಟ್ ತೀರ್ಪುಗಳನ್ನೂ ಉಲ್ಲೇಖಿಸಿದ್ದು, ಸಭೆಯಲ್ಲಿ ಫಲಪ್ರದವಾದ ಮತ್ತು ಸಕಾರಾತ್ಮಕವಾದ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಮುಂದಿನ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ ಎಂದು ಈಶ್ವರ ಖಂಡ್ರೆ ತಿಳಿಸದರು.

banner

ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಮಂಡಳಿಗೆ ವಿವರವಾದ ಪತ್ರ ಬರೆಯಲಾಗುವುದೂ ಎಂದೂ ಖಂಡ್ರೆ ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ