Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಜಿಲ್ಲಾ ಸುದ್ದಿ

ರಾಜ್ಯದಲ್ಲಿ 9,357 ಗ್ರಾ.ಪಂ. ಸದಸ್ಯರು ಅನಕ್ಷರಸ್ಥರು: ಸಚಿವ ಪ್ರಿಯಾಂಕ್ ಖರ್ಗೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
priayank kharge
priayank kharge

ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು, 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ 94,775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10ರಷ್ಟು ಅಂದರೆ 9,357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ,  ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದು ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿರುತ್ತದೆ ಎಂದು ಹೇಳಿದ್ದಾರೆ.

2024ರ ಸೆಪ್ಟೆಂಬರ್‌ 1ರಿಂದ ಅಕ್ಟೋಬರ್‌ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು,   ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment