Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್
ಜಿಲ್ಲಾ ಸುದ್ದಿ

ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿ ಸಿಹಿಸುದ್ದಿ ನೀಡಿದ ಸಚಿವ ಸೋಮಣ್ಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು

ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ತುಮಕೂರು-ಯಶವಂತಪುರ ನಡುವೆ ಮೆಮು ರೈಲು ಸಂಚಾರಕ್ಕೆ ಶನಿವಾರ ತುಮಕೂರಿನಲ್ಲಿ ಚಾಲನೆ ನೀಡಿದ್ದಾರೆ.

ರೈಲಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು-ಯಶವಂತಪುರ ಜೊತೆಗೆ ಬಾಣಸವಾಡಿ-ತುಮಕೂರು ನಡುವೆ ಹೊಸ ಮೆಮು ರೈಲು ಸೇವೆ ಆರಂಭವಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜಿ.ಎಸ್. ಬಸವರಾಜ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಎಚ್.ನಿಂಗಪ್ಪ ಸೇರಿದಂತೆ ರೈಲ್ವೇ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಮೆಮು ರೈಲು ಸಂಚರಿಸುವ ಸಮಯ ತುಮಕೂರು-ಯಶವಂತಪುರ ನಡುವಿನ ಹೊಸ ಮೆಮು ರೈಲು ಇವತ್ತಿನಿಂದಲೇ ಕಾರ್ಯಾರಂಭ ಮಾಡಿದೆ. ಈ ಮೆಮು ರೈಲು ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನ ಸಂಚರಿಸಲಿದೆ.

ರೈಲು ಸಂಖ್ಯೆ 06201: ತುಮಕೂರು-ಯಶವಂತಪುರ ಮೆಮು ರೈಲು ಪ್ರತಿದಿನ ಬೆಳಿಗ್ಗೆ 8.45ಕ್ಕೆ ತುಮಕೂರಿನಿಂದ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 06202: ಯಶವಂತಪುರ-ತುಮಕೂರು ಮೆಮು ರೈಲು ಸಂಜೆ 5.40ಕ್ಕೆ ಯಶವಂತಪುರದಿಂದ ಹೊರಟು ಸಂಜೆ 7.05ಕ್ಕೆ ತುಮಕೂರು ತಲುಪಲಿದೆ. ತುಮಕೂರು-ಬಾಣಸವಾಡಿ ಸೆಪ್ಟೆಂಬರ್​ 30 ರಿಂದ ಆರಂಭವಾಗಲಿರುವ ತುಮಕೂರು-ಬಾಣಸವಾಡಿ ಮೆಮು ರೈಲು ಸಂಚಾರ ಆರಂಭವಾಗಲಿದೆ. ಈ ಮೆಮು ರೈಲು ಸೋಮವಾರ ಮಾತ್ರ ಕಾರ್ಯನಿರ್ವಹಿಸಲಿದೆ.

ರೈಲು ಸಂಖ್ಯೆ 06205: ಬಾಣಸವಾಡಿ-ತುಮಕೂರು ಮೆಮು ರೈಲು ಪ್ರತಿ ಸೋಮವಾರ ಬೆಳಿಗ್ಗೆ 6.15ಕ್ಕೆ ಬಾಣಸವಾಡಿಯಿಂದ ಹೊರಟು ಬೆಳಿಗ್ಗೆ 8.35ಕ್ಕೆ ತುಮಕೂರು ತಲುಪಲಿದೆ.

ರೈಲು ಸಂಖ್ಯೆ 06205: ತುಮಕೂರು-ಬಾಣಸವಾಡಿ ಮೆಮು ರೈಲು ಪ್ರತಿ ಶನಿವಾರ ಸಂಜೆ 7.40ಕ್ಕೆ ತುಮಕೂರಿನಿಂದ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8426 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment