Home ತಾಜಾ ಸುದ್ದಿ ರಾಜ್ಯದಲ್ಲಿ ಬಿಜೆಪಿ ಪರ ಮೋದಿ, ಶಾ, ಯೋಗಿ, ನಡ್ಡಾ ಪ್ರಚಾರ!

ರಾಜ್ಯದಲ್ಲಿ ಬಿಜೆಪಿ ಪರ ಮೋದಿ, ಶಾ, ಯೋಗಿ, ನಡ್ಡಾ ಪ್ರಚಾರ!

by Editor
0 comments

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸುಮಾರು 1 ಲಕ್ಷ ಜನರ ನಿರೀಕ್ಷೆ ಇದೆ. ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗುತ್ತದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಸಭೆ ಇದಾಗಿರುತ್ತದೆ. 2 ಕಡೆ ವಿಜಯ ಸಂಕಲ್ಪ ಸಮಾವೇಶ ನಡೆಯಲಿದ್ದು, ಸಿದ್ಧತಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸವೂ ಕೂಡ ನಿಗದಿಯಾಗಿದೆ. 23, 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುತ್ತಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್ ಷೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ ಇರುತ್ತದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಷೋ ಇರುತ್ತದೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಷೋ ಇರಲಿದೆ ಎಂದು ವಿವರಿಸಿದರು.

24ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿ ರೋಡ್ ಷೋದಲ್ಲಿ ಪಾಲ್ಗೊಳ್ಳುತ್ತಾರೆ.

banner

ಇದೇ 24ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ. ಬೆಳಿಗ್ಗೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಷೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ಇರುತ್ತದೆ ಎಂದು ವಿವರಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!