Thursday, September 19, 2024
Google search engine
Homeತಾಜಾ ಸುದ್ದಿಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ: ರೋಗಿಗಳು ಪಾರು

ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ: ರೋಗಿಗಳು ಪಾರು

ಬೆಂಗಳೂರಿನ ಪ್ರತಿಷ್ಠಿತ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ರೋಗಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಆರ್‌ಎಂವಿ ಲೇಔಟ್‌ ಬಳಿಯ ರಾಮಯ್ಯ ಆಸ್ಪತ್ರೆಯ ಎರಡನೇ ಅಂತಸ್ತಿನ ಕಾರ್ಡಿಯಕ್ ಎಸಿ ವಾರ್ಡ್ ನಲ್ಲಿ   ಗುರುವಾರ ಮಧ್ಯಾಹ್ನ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆ ವಾರ್ಡ್ ಗಳಿಗೆ ಹಬ್ಬಿದ್ದು ಕೂಡಲೇ ರೋಗಿಗಳನ್ನು ಸ್ಥಳಾಂತರ ಮಾಡಿ ರಕ್ಷಿಸಲಾಗಿದೆ.

ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಅಗತ್ಯ ಕ್ರಮಕೈಕೊಂಡಿದ್ದಾರೆ. ಯಾವುದೇ ರೋಗಿಗಳಿಗೆ ಸಮಸ್ಯೆಯಾಗಿಲ್ಲ. ಕಾರಣ ಏನು ಎಂದು ತಿಳಿದುಬಂದಿಲ್ಲ.

ಚಿಕಿತ್ಸೆಗೆ ದಾಖಲಾಗಿದ್ದ ವಾರ್ಡ್‌ನಲ್ಲಿದ್ದ 3 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments