Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಭಾರೀ ಮಳೆಗೆ ತತ್ತರಿಸಿದ ಮುಂಬೈ: ರೈಲ್ವೆ, ವಿಮಾನ ಸೇವೆಗಳಲ್ಲಿ ವ್ಯತ್ಯಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು

ವಾಣಿಜ್ಯ ನಗರಿ ಮುಂಬೈನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.  ರೈಲು ಸೇವೆಯನ್ನು ರದ್ದುಗೊಳಿಸಲಾಗಿದ್ದು, ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಭಾರೀ ಮಳೆಯಿಂದಾಗಿ ಮುಂಬೈನ ಪ್ರಮುಖ ರಸ್ತೆಗಳು, ರೈಲು ಮಾರ್ಗಗಳು ನೀರು ತುಂಬಿಕೊಂಡಿದ್ದು, ಸಂಚಾರ ವ್ಯತ್ಯಸವಾಗಿದೆ. ಹವಾಮಾನ ವೈಪರಿತ್ಯದಿಂದ ವಿಮಾನ ಸಂಚಾರದಲ್ಲೂ ವ್ಯತ್ಯಯಗೊಂಡಿದ್ದು, ಜನರು ಪರದಾಡುವಂತಾಗಿದೆ.

ಹವಾಮಾನ ಇಲಾಖೆ ಪ್ರಕಾರ ಜುಲೈ 8ರಂದು ಇಡೀ ದಿನ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಬೈನಲ್ಲಿ ನಿನ್ನೆ ಒಂದೇ ದಿನ ದಾಖಲೆಯ 300 ಮಿ.ಮೀ. ಮಳೆಯಾಗಿದೆ. ಮಧ್ಯಾಹ್ನ 1 ಗಂಟೆಯಿಂದ 7 ಗಂಟೆಯವರೆಗೆ ಅಂದರೆ ಸುಮಾರು 6 ಗಂಟೆಗಳಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆಯಾಗಿದೆ.

ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳೆಲ್ಲಾ ಕೆರೆಯಂತಾಗಿದ್ದು, ಹಲವಾರು ಬಡಾವಣೆಗಳ ತಗ್ಗುಪ್ರದೇಶಗಳಲ್ಲಿ ಮನೆಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.

ಭಾರೀ ಮಳೆಯಿಂದಾಗಿ ರೈಲು ಮಾರ್ಗಳಲ್ಲಿ ನೀರು ತುಂಬಿದೆ. ಕೆಲವು ಕಡೆ ಮಣ್ಣು ಕುಸಿದಿದ್ದು, ಮರವೊಂದು ಹಳಿಗಳ ಮೇಲೆ ಬಿದ್ದಿದೆ. ಇದರಿಂದ ರೈಲು ಸೇವೆ ಅಪಾಯಕಾರಿ ಎಂಬ ಕಾರಣಕ್ಕೆ ಕೆಲವು ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾಸರ ಮತ್ತು ಟಿಟ್ವಾಲಾ ನಡುವಿನ ರೈಲು ಸಂಚಾರ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ವಸಿಂದ್ ಮತ್ತು ಖಾಡ್ವಾಲಿ ರಸ್ತೆ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೇ ದೂರದ ರೈಲು ಸೇವೆಗಳಿಗೆ ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment