Saturday, September 21, 2024
Google search engine
Homeಕಾನೂನುಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್!

ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್!

ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಮರಳಿದ್ದಾರೆ.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುನಿರತ್ನ ಅವರನ್ನು ಕಗ್ಗಲಿಪುರ ಪೊಲೀಸರು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಶನಿವಾರ ಬೆಳಿಗ್ಗೆ ಹಾಜರುಪಡಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಕೋಲಾರ ಬಳಿ ಆಂಧ್ರಪ್ರದೇಶಕ್ಕೆ ಪರಾರಿಯಾಗುವಾಗ ಬಂಧನಕ್ಕೆ ಒಳಗಾಗಿದ್ದು, ಜಾಮೀನು ಪಡೆದು ಹೊರಗೆ ಬರುತ್ತಿದ್ದಂತೆ ಕಗ್ಗಲಿಪುರ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments