Wednesday, 18 November 2026 — Kannadavahini
BREAKING NEWS
ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ
ಕಾನೂನು

ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
muniratna
muniratna

ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಮರಳಿದ್ದಾರೆ.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುನಿರತ್ನ ಅವರನ್ನು ಕಗ್ಗಲಿಪುರ ಪೊಲೀಸರು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಶನಿವಾರ ಬೆಳಿಗ್ಗೆ ಹಾಜರುಪಡಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಕೋಲಾರ ಬಳಿ ಆಂಧ್ರಪ್ರದೇಶಕ್ಕೆ ಪರಾರಿಯಾಗುವಾಗ ಬಂಧನಕ್ಕೆ ಒಳಗಾಗಿದ್ದು, ಜಾಮೀನು ಪಡೆದು ಹೊರಗೆ ಬರುತ್ತಿದ್ದಂತೆ ಕಗ್ಗಲಿಪುರ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8424 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment