Saturday, July 6, 2024
Google search engine
Homeಅಪರಾಧಮೈಸೂರು: ಭಜರಂಗಿ, ವಜ್ರಕಾಯ ಚಿತ್ರದ ನಟಿಯ ಭೀಕರ ಕೊಲೆ!

ಮೈಸೂರು: ಭಜರಂಗಿ, ವಜ್ರಕಾಯ ಚಿತ್ರದ ನಟಿಯ ಭೀಕರ ಕೊಲೆ!

ಭಜರಂಗಿ’ ಸಿನಿಮಾದ ನಟಿ ಹಾಗೂ ಕಾಂಗ್ರೆಸ್ ನಾಯಕಿಯಾಗಿದ್ದ ವಿದ್ಯಾ ನಂದೀಶ್ ಅವರನ್ನು ಸಾಮಜಸೇವಕ ಪತಿಯೇ ಭೀಕರವಾಗಿ ಕೊಂದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ನಂದೀಶ್‌ ಕೊಲೆಯಾಗಿದ್ದು, ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರು ನಿವಾಸಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದ ವಿದ್ಯಾ ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು.

ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments