ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ನಾಗಸಂದ್ರ – ಮಾದಾವರ ವಿಸ್ತರಿತ ನಮ್ಮ ಮೆಟ್ರೋ ಹಸಿರು ಮಾರ್ಗ ಉದ್ಘಾಟನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾದ ನಂತರ ವಿಸ್ತರಿತ ಹಸಿರು ಮಾರ್ಗವನ್ನು ಇನ್ನೆರಡು ದಿನದಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳ್ಳಲಿದೆ ಎಂದು ಪ್ರಕಟಿಸಿದರು.
ಕಳೆದ ವರ್ಷ ನೇರಳೆ ಮಾರ್ಗದ ಉದ್ಘಾಟನೆಯನ್ನು ಕೂಡ ಯಾವುದೇ ವಿಐಪಿ ಕಾರ್ಯಕ್ರಮಗಳ ಆಯೋಜನೆ ಇಲ್ಲದೇ ಸಾರ್ವಜನಿಕ ಸೇವೆಗೆ ಮುಕ್ತಗೊಂಡಿತ್ತು.
ಇದಕ್ಕೂ ಮುನ್ನ ತೇಜಸ್ವಿ ಸೂರ್ಯ ಈ ಬಗ್ಗೆ ಎಕ್ಸ್ ನಲ್ಲಿ ಗೋ ಗ್ರೀನ್ ಎಂದು ಪೋಸ್ಟ್ ಮಾಡಿ ಮೆಟ್ರೋ ವಿಸ್ತರಿತ ಮಾರ್ಗದ ಉದ್ಘಾಟನೆಯ ಸುಳಿವು ನೀಡಿದ್ದರು.
ವಿಸ್ತರಿತ ಹಸಿರು ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರುಕಲ್ಲು, ಮಾದಾವರ ಗಳನ್ನು ಒಳಗೊಂಡ 3 ಮೆಟ್ರೋ ನಿಲ್ದಾಣಗಳಿವೆ. ತುಮಕೂರು ರಸ್ತೆಯಲ್ಲಿನ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಈ ಮಾರ್ಗವು ಬಹುಮುಖ್ಯ ಪಾತ್ರ ವಹಿಸಲಿದೆ. 91 ತಿಂಗಳ ಅವಧಿ ತೆಗೆದುಕೊಂಡ ನಂತರ ಇದೀಗ ಸಾರ್ವಜನಿಕರ ಸೇವೆಗೆ ಮುಕ್ತವಾಗಿದೆ.