Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಕ್ರೀಡೆ

4 ವರ್ಷಕ್ಕೆ ಮುರಿದುಬಿದ್ದ ಹಾರ್ದಿಕ್ – ನತಾಶಾ ದಾಂಪತ್ಯ: ಮಗನ ಜೊತೆ ತವರಿಗೆ ಮರಳಿದ ನತಾಶಾ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 5 ವೀಕ್ಷಣೆಗಳು
hardik pandya wife

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ರೂಪದರ್ಶಿ ನತಾಶಾ ನತಾಶಾ ‍ಸ್ಟಾಂಕೊವಿಕ್ ದಾಂಪತ್ಯ ಅಧಿಕೃತವಾಗಿ ಮುರಿದುಬಿದ್ದಿದೆ.

ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದ್ದ ವಿಚ್ಛೇದನ ವದಂತಿಯನ್ನು ಇಬ್ಬರೂ ಅಧಿಕೃತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ನಾವು ಸಾಕಷ್ಟು ಪ್ರಯತ್ನಿಸಿದೆವು. ಆದರೆ ಸಾಧ್ಯವಾಗಲಿಲ್ಲ ಎಂದು ಇನ್ ಸ್ಟಾಗ್ರಾಂನಲ್ಲಿ ಹಾರ್ದಿಕ್ ಪಾಂಡ್ಯ ಪೋಸ್ಟ್ ಮಾಡಿದ್ದಾರೆ.

2018ರಲ್ಲಿ ಮೊದಲ ಬಾರಿ ಹಾರ್ದಿಕ್ ಪಾಂಡ್ಯ ಮತ್ತು ಡ್ಯಾನ್ಸರ್, ನಟಿ ಹಾಗೂ ರೂಪದರ್ಶಿ ನತಾಶಾ ಪರಸ್ಪರ ಪರಿಚಯ ಆಗಿದ್ದು, 2020 ಜನವರಿ 1ರಂದು ಇಬ್ಬರು ಸುತ್ತಾಡಲು ಆರಂಭಿಸಿದ್ದರು.

2020 ಮೇ 30ರಂದು ಕೋವಿಡ್ ಲಾಕ್ ಡೌನ್ ನಡುವೆ ಇಬ್ಬರೂ ಮದುವೆ ಆಗಿದ್ದು, ಮನೆಯವರಿಗೆ ಮಾಹಿತಿ ಇರಲಿಲ್ಲ. 2020 ಜುಲೈ 30ರಂದು ಅಂದರೆ ಮದುವೆ ಆದ ಎರಡೇ ತಿಂಗಳಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಆ ಮಗು ಆಗಸ್ತ್ಯಗೆ 4 ವರ್ಷ ವಯಸ್ಸಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ನತಾಶಾ ಮಗನ ಜೊತೆ ಸರ್ಬಿಯಾಗೆ ಮರಳಿದ್ದು, ಹಾರ್ದಿಕ್ ಕೂಡ ಶೀಘ‍್ರದಲ್ಲೇ ಸರ್ಬಿಯಾಗೆ ಹೋಗಿ ಅಲ್ಲಿಯೇ ನೆಲೆಸುತ್ತಾರೆ ಎಂದು ಹೇಳಲಾಗಿತ್ತು.

ಶ್ರೀಲಂಕಾ ಟಿ-20 ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ಪಡೆಯಲು ವಿಫಲವಾಗಿದ್ದು, ಸೂರ್ಯಕುಮಾರ್ ಗೆ ನಾಯಕ ಪಟ್ಟ ನೀಡಲಾಗಿದೆ. ಬಿಸಿಸಿಐ ಅಧಿಕೃತವಾಗಿ ಟಿ-20 ತಂಡ ಪ್ರಕಟಿಸಿದ ಬೆನ್ನಲ್ಲೇ ಹಾರ್ದಿಕ್ ವಿಚ್ಛೇದನ ಸುದ್ದಿಯನ್ನು ಪ್ರಕಟಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment