Home ತಾಜಾ ಸುದ್ದಿ ಲೋಕಸಭೆಯಲ್ಲಿ ನೀಟ್ ಅಕ್ರಮ ಪ್ರತಿಧ್ವನಿ: ಉಭಯ ಸದನಗಳ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಲೋಕಸಭೆಯಲ್ಲಿ ನೀಟ್ ಅಕ್ರಮ ಪ್ರತಿಧ್ವನಿ: ಉಭಯ ಸದನಗಳ ಕಲಾಪ ಸೋಮವಾರಕ್ಕೆ ಮುಂದೂಡಿಕೆ

by Editor
0 comments

ನೀಟ್ ಪರೀಕ್ಷಾ ಅಕ್ರಮಗಳ ಕುರಿತು ಪ್ರತಿಪಕ್ಷಗಳು ಮತ್ತು ಆಡಳಿತಾರೂಢ ಸದಸ್ಯರ ನಡುವೆ ಗದ್ಧಲ ಉಂಟಾಗಿದ್ದರಿಂದ ಉಭಯ ಸದನಗಳ ಕಲಾಪವನ್ನು ಸೋಮವಾರದವರೆಗೆ ಮುಂದೂಡಲಾಗಿದೆ.

ಶುಕ್ರವಾರ ಕಲಾಪ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಲೋಕಸಭಾ ಮತ್ತು ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು. ನಂತರ ಕಲಾಪ ಮರು ಆರಂಭಗೊಂಡಾಗ ಪ್ರತಿಪಕ್ಷಗಳು ನೀಟ್ ಅಕ್ರಮಗಳ ವಿಷಯದ ಮೇಲೆ ಚರ್ಚೆಗೆ ಪಟ್ಟು ಹಿಡಿದು ಘೋಷಣೆ ಕೂಗಿದ್ದರಿಂದ ಕಲಾಪವನ್ನು ಸೋಮವಾರದವರೆಗೆ ಮುಂದೂಡಲಾಯಿತು..

ಪ್ರತಿಪಕ್ಷಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದವು. ಆದರೆ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯ ನಂತರ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದಾಗ ಪ್ರತಿಪಕ್ಷಗಳು ಒಪ್ಪದೇ ಕೂಡಲೇ ಚರ್ಚೆಗೆ ತೆಗೆದುಕೊಳ್ಳುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ನೀಟ್ ಪರೀಕ್ಷಾ ಅಕ್ರಮ ಯುವಕರ ಭವಿಷ್ಯದ ಪ್ರಶ್ನೆಯಾಗಿದೆ. ಸರ್ವ ಪ್ರತಿಪಕ್ಷಗಳು ಈ ಬಗ್ಗೆ ಚರ್ಚೆ ನಡೆಸಲು ಒಮ್ಮತ ವ್ಯಕ್ತಪಡಿಸಿವೆ. ಆದ್ದರಿಂದ ಸ್ಪೀಕರ್ ಗಂಭೀರ ವಿಷಯದವಾದ ನೀಟ್ ಅಕ್ರಮಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು.

banner

ರಾಷ್ಟ್ರಪತಿಗಳ ಭಾಷಣದ ವೇಳೆ ನೀವು ಯಾವುದೇ ವಿಷಯವನ್ನು ಪ್ರಸ್ತಾಪಿಸಬಹುದು. ಇದಕ್ಕಾಗಿ ಶೂನ್ಯವೇಳೆ ಅಥವಾ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸ್ಪೀಕರ್ ಮನವಿಗೆ ಪ್ರತಿಪಕ್ಷಗಳು ಸಹಮತ ವ್ಯಕ್ತಪಡಿಸದೇ ಕೂಡಲೇ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು. ಇದರಿಂದ ಸಭೆಯಲ್ಲಿ ಗದ್ಧಲದ ವಾತಾವರಣ ಉಂಟಾಗಿದ್ದರಿಂದ ಕಲಾಪವನ್ನು ಮುಂದೂಡಲಾಯಿತು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬಿಜೆಪಿಗೆ ಮಹಾರಾಷ್ಟ್ರ ಸಿಎಂ ಪಟ್ಟ, 2 ಪಕ್ಷಗಳಿಗ ಡಿಸಿಎಂ ಸ್ಥಾನ? World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ! ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ? Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ