Home ತಾಜಾ ಸುದ್ದಿ ಸಿಎಂ ಜೊತೆಗಿನ ಸಂಧಾನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಸಿಎಂ ಜೊತೆಗಿನ ಸಂಧಾನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

by Editor
0 comments
liquer bar

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ರಾಜಿ ಸಂಧಾನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಬಾರ್ ಮಾಲೀಕರು ನವೆಂಬರ್ 20ರಂದು ಕರೆ ನೀಡಿದ್ದ ಬಾರ್ ಬಂದ್ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಅವರ ನಿವಾಸ ಕೃಷ್ಣಾದಲ್ಲಿ ಮದ್ಯ ಮಾಲೀಕರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಬಾರ್ ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಬಾರ್ ಮಾಲೀಕರ ಸಂಘದ ವಿಭಾಗೀಯ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ ಮಾಡಿ ಮಾತುಕತೆ ನಡೆಸಿತು.

ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ ಮಾಡಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ  ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.

banner

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ವರದಿ ನೀಡಲು ಸೂಚಿಸಲಾಗುವುದು. ಅಲ್ಲದೇ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ Tirupati ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಕೇಳಿದಷ್ಟು ಸಿಗಲಿದೆ `ಲಡ್ಡು’ ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲು: 3 ತಿಂಗಳಿಗೆ ಫ್ರಾನ್ಸ್  ಸರಕಾರ ಪತನ