Monday, September 16, 2024
Google search engine
Homeತಾಜಾ ಸುದ್ದಿಎಚ್ಎಂಟಿಯಿಂದ ಅಕ್ರಮವಾಗಿ ಮಾರಾಟವಾಗಿದ್ದ 10,000 ಕೋಟಿ ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸೂಚನೆ

ಎಚ್ಎಂಟಿಯಿಂದ ಅಕ್ರಮವಾಗಿ ಮಾರಾಟವಾಗಿದ್ದ 10,000 ಕೋಟಿ ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸೂಚನೆ

ಬೆಂಗಳೂರಿನಲ್ಲಿ ಎಚ್ ಎಂಟಿ ಸರ್ಕಾರ ಅಕ್ರಮವಾಗಿ ಮಾರಾಟ ಮಾಡಿರುವ 10 ಸಾವಿರ ಕೋಟಿ ರೂ. ಮೌಲ್ಯದ 599  ಎಕರೆ ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆಯಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಮರು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1986 ಜೂನ್ 11ರಲ್ಲೇ ಗೆಜೆಟ್ ಅಧಿಸೂಚನೆ ಆಗಿರುವ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ಸಂಸ್ಥೆ ಅಕ್ರಮವಾಗಿ ಸರಕಾರಿ ಇಲಾಖೆಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಕೂಡಲೇ ಒಟ್ಡು  599 ಎಕರೆ ಅರಣ್ಯ ಭೂಮಿಯ ಪೈಕಿ ಎಚ್.ಎಂ.ಟಿ. ನೀಡಲಾಗಿದೆ ಎನ್ನಲಾದ 469 ಎಕರೆ 32 ಗುಂಟೆಯಲ್ಲಿ ಖಾಲಿ ಇರುವ 281 ಎಕರೆ ಜಮೀನನ್ನು ಮೊದಲಿಗೆ ವಶಕ್ಕೆ ಪಡೆದು ನಂತರ ಉಳಿದ ಭೂಮಿಯ ವಶಕ್ಕೆ ಕಾನೂನು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 64ಎ ಅಡಿಯಲ್ಲಿ ಈ ಹಿಂದೆ ಪ್ರಕ್ರಿಯೆ ನಡೆದಿದ್ದು ಭೂಮಿ ತೆರವಿಗೆ ಆದೇಶ ಆಗಿದ್ದರೂ, ಈವರೆಗೆ ಕ್ರಮ ವಹಿಸದ ಅರಣ್ಯಾಧಿಕಾರಿಗಳ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವರು, ಈ ಕುರಿತು ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

ಅರಣ್ಯ ನಿಯಂತ್ರಣ ಕಾಯಿದೆ 1900ರ ಸೆಕ್ಷನ್ 30ರ ಸಬ್ ಸೆಕ್ಷನ್ (1)ರ ಅಡಿಯಲ್ಲಿ ಯಾವುದೇ ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಯಾವುದೇ ಅರಣ್ಯ ಭೂಮಿಯನ್ನು ಮಂಜೂರಾತಿ ಮಾಡುವ ಮುನ್ನ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಲು ಮೊದಲಿಗೆ ಡಿ ನೋಟಿಫೈ ಮಾಡಿ, ಗೆಜೆಟ್ ಅಧಿಸೂಚನೆ ಮಾಡಬೇಕಾಗಿರುತ್ತದೆ.

ಆದರೆ ಜಮೀನನ್ನು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಹನುಮಾನ್ 1963ರಲ್ಲಿ ಎಚ್.ಎಂ.ಟಿ.ಗೆ ದಾನಪತ್ರದ ಮೂಲಕ ವರ್ಗಾವಣೆ ಮಾಡಿದ್ದಾರೆ. ದಾನಪತ್ರದ ಕುರಿತಂತೆ ಯಾವುದೇ ಗೆಜೆಟ್ ಅಧಿಸೂಚನೆಯೂ ಆಗಿರುವುದಿಲ್ಲ. ಸದರಿ ಭೂಮಿ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಕೂಡ ಆಗಿರುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments