Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಬೆಂಗಳೂರಿನ 700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ವಶಕ್ಕೆ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
eshwar khandre
eshwar khandre

ಬೆಂಗಳೂರಿನ ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಸಂಖ್ಯೆ ಆರ್.ಎಚ್.ಎಸ್.(2) 44/82-83 ಡಿ.ಟಿ. 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.)ಯಲ್ಲಿ ನಮೂದಾಗಿದೆ. ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಅದನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಈಶ್ವರ ಖಂಡ್ರೆ ಟಿಪ್ಪಣಿಯನ್ನೂ ನೀಡಿದ್ದಾರೆ.

ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಬಳಿಕ ಇದೇ ಕೊತ್ತನೂರು ಗ್ರಾಮದ ಸರ್ವೆ ನಂಬರ್ 47ರಲ್ಲಿ 2006ರಲ್ಲಿ ಅರಣ್ಯ ಇಲಾಖೆಗೆ ಮಂಜೂರಾಗಿ ಒತ್ತುವರಿಯಾಗಿದ್ದ 17 ಎಕರೆ 34 ಗುಂಟೆ ಜಮೀನನ್ನು ಮರು ವಶಪಡಿಸಿಕೊಂಡು ಇಲ್ಲಿ ಸಸ್ಯೋದ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಶಂಕುಸ್ಥಾಪನೆಯನ್ನೂ ನೆರೆವೇರಿಸಿದ್ದರು.

ಅರಣ್ಯ ಇಲಾಖೆಗೆ ಮಂಜೂರಾಗಿದ್ದ ಈ ಭೂಮಿಯನ್ನು 17 ವರ್ಷಗಳ ತರುವಾಯ 2023ರ ಜನವರಿಯಲ್ಲಿ  ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದರು.

ಕಾನೂನು ಬಾಹೀರವಾಗಿ ಅರಣ್ಯ ಭೂಮಿಯನ್ನು ಕಂದಾಯ ಎಂದು ಮಾರ್ಪಾಡು ಮಾಡಿದ್ದ ಅಂದಿನ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದರು. ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment